Belagavi News In Kannada | News Belgaum

ಪ್ರಕಟಣೆ

ರಂಗ ಪಂಚಮಿ: ಮಾ.22 ರಂದು ಮದ್ಯ ಮಾರಾಟ ನಿಷೇಧ

 

ಬೆಳಗಾವಿ, : ನಗರದ ಶಹಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾರ್ಚ್ 22 (ಮಂಗಳವಾರ)ರಂದು ಸಾರ್ವಜನಿಕರು ರಂಗ ಪಂಚಮಿ ಆಚರಿಸಲಿದ್ದು, ನಗರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಮಾರ್ಚ್ 22( ಮಂಗಳವಾರ)ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಮದ್ಯದ ಅಂಗಡಿ, ವೈನಶಾಪ್, ಬಾರ್, ಕ್ಲಬ್ ಮತ್ತು ಹೊಟೇಲ್‍ಗಳಲ್ಲಿ ಮದ್ಯ ಮಾರಾಟ ಮತ್ತು ಮದ್ಯ ಸಾಗಣಿಕೆಯನ್ನು ನಿಷೇಧಿಸಿ, ಮದ್ಯದ ಅಂಗಡಿಗಳನ್ನು ಹಾಗೂ ಕೆಎಸ್‍ಬಿಸಿಎಲ್ ಡಿಪೋಗಳನ್ನು, ಹೊಟೇಲ್‍ಗಳಲ್ಲಿರುವ ಬಾರ್‍ಗಳನ್ನು ಮುಚ್ಚತಕ್ಕದ್ದು. ಹಾಗೇ ಅಬಕಾರಿ ಸನ್ನದು ಅಂಗಡಿಗಳನ್ನು ಮುಚ್ಚಿ ಸೀಲ್ ಹಾಕತಕ್ಕದ್ದು ಎಂದು ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಹಾಗೂ ಪೊಲೀಸ್ ಆಯುಕ್ತರಾದ ಡಾ. ಬೋರಲಿಂಗಯ್ಯ ಎಂ.ಜಿ. ಅವರು ತಿಳಿಸಿದ್ದಾರೆ.
ಅಬಕಾರಿ ಉಪ ಆಯುಕ್ತರು, ಕಾನೂನು ಸುವ್ಯವಸ್ಥೆಯ ಬೆಳಗಾವಿ ತಾಲೂಕು ಮತ್ತು ಉಪ ಪೊಲೀಸ್ ಆಯುಕ್ತರು, ಬೆಳಗಾವಿ ನಗರ ಹಾಗೂ ಅವರ ಅಧೀನ ಅಧಿಕಾರಿಗಳು, ಹೆಚ್ಚುವರಿ ಅಬಕಾರಿ ಅಧೀಕ್ಷಕರು, ಅಬಕಾರಿ ಉಪ-ಅಧೀಕ್ಷಕರು ರಂಗ ಪಂಚಮಿ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಮುಂದಾಗಬೇಕು. ನಿಯಮ ಮೀರಿದವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಹಾಗೂ ಪೊಲೀಸ್ ಆಯುಕ್ತರಾದ ಡಾ. ಬೋರಲಿಂಗಯ್ಯ ಎಂ.ಜಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///

ಮಾ.28ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

 

ಬೆಳಗಾವಿ, : 2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ನಡೆಸಲಾಗುತ್ತಿದ್ದು ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳುವುದಕ್ಕೆ ಮತ್ತು ಹಿಂದಿರುಗುವುದಕ್ಕೆ ಅನುಕೂಲವಾಗಲಿ ಎಂದು ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.
ಜಿಲ್ಲೆಯ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಎಸ್.ಎಸ್.ಎಲ್.ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///

ಶಿರಗುಪ್ಪಿ 110/11 ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರ: ಮಾ.25 ರಂದು ವಿದ್ಯುತ್ ವ್ಯತ್ಯಯ

ಬೆಳಗಾವಿ, : ಶಿರಗುಪ್ಪಿಯ 110/11 ಕೆವ್ಹಿ ಶಿರಗುಪ್ಪಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ ಅಧಿಕಾರಿಗಳು, ಯಂತ್ರೋಪಕರಣಗಳ ಮೇಲೆ ದುರಸ್ತಿ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಶಿರಗುಪ್ಪಿ ಐಪಿ, ಜುಗೂಳ ಐಪಿ, ಮಂಗಾವತಿ ಐಪಿ ನೀರಾವರಿ ಫೀಡರ್‍ಗಳ ಮೇಲೆ ಕಾಗವಾಡ ಶಾಖೆಯ ಶಿರಗುಪ್ಪಿ, ಮಂಗಾವತಿ, ಜುಗೂಳ, ಗ್ರಾಮಗಳಲ್ಲಿ ಮಾರ್ಚ್ 25 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ.
ಸಾರ್ವಜನಿಕರು, ರೈತರು, ಮತ್ತು ವಿದ್ಯುತ್ ಗ್ರಾಹಕರು ಹೆಸ್ಕಾಂ ಜೊತೆಗೆ ಸಹಕರಿಸಬೇಕು ಎಂದು ಹು.ವಿ.ಸ.ಕಂ.ನಿ. ಉಗಾರ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///

ರಾಷ್ಟ್ರೀಯ ಜಲ ಜೀವನ ಮಿಷನ್
—————————————————4 ದಿನಗಳ ವಸತಿಸಹಿತ ತರಬೇತಿ : ಮಾರ್ಚ್ 22 ರಿಂದ ಪ್ರಾರಂಭ

ಬೆಳಗಾವಿ, : ರಾಷ್ಟ್ರೀಯ ಜಲ ಜೀವನ ಮಿಷನ್ ಯೋಜನೆಯಡಿ ಗ್ರಾಮ ಪಂಚಾಯತಿ, ನೀರು ನೈರ್ಮಲ್ಯ ಸಮಿತಿ ಸದಸ್ಯರಿಗೆ 4 ದಿನಗಳ ವಸತಿಸಹಿತ ತರಬೇತಿ ಕಾರ್ಯಕ್ರಮವು ಮಾರ್ಚ್ 22 ರಿಂದ ರತ್ನ ಸಂಗಮ ರೆಸಿಡೆನ್ಸಿ, ಗೋಕಾಕ ರೋಡ ಯರಗಟ್ಟಿಯಲ್ಲಿ ನಡೆಯಲಿ
ಮೊದಲನೇ ತಂಡ ಬೈಲಹೊಂಗಲ ತಾಲೂಕಿನ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರಿಗೆ ಮಾರ್ಚ್ 22 ರಿಂದ ಮಾರ್ಚ್ 25 ರವರೆಗೆ ಮತ್ತು ಎರಡನೇ ತಂಡ ಸವದತ್ತಿ ತಾಲೂಕಿನವರಿಗೆ ಮಾರ್ಚ್ 28 ರಿಂದ ಮಾರ್ಚ್ 31 ರವರೆಗೆ 4 ದಿನಗಳವರಗೆ ಸನಿವಾಸ ಸಾಮಥ್ರ್ಯಾಭಿವೃದ್ದಿ ತರಬೇತಿ ನೀಡಲಾಗುವುದು.
ವಿಧಾನಸಭಾ ಉಪ ಸಭಾಪತಿಗಳು ಹಾಗೂ ಸವದತ್ತಿ ಶಾಸಕರಾದ ಆನಂದ ಚ. ಮಾಮನಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುರಗೋಡ ಆರ್.ಡಿ.ಎಸ್. ಯೋಜನಾ ನಿರ್ದೇಶಕರಾದ ಬಸನಗೌಡ ಗೌಡತಿ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದು, ವಿಶೇಷ ಅತಿಥಿಗಳಾಗಿ ಬೈಲಹೊಂಗಲ ಶಾಸಕರಾದ ಮಹಾಂತೇಶ ಕೌಜಲಗಿ, ಕಿತ್ತೂರು ಶಾಸಕರಾದ ಮಹಾಂತೇಶ ದೊಡ್ಡಗೌಡರ ಆಗಮಿಸಲಿದ್ದಾರೆ.
ಜಿಲ್ಲಾಧಿಕಾರಿಗಳಾದ ಎಂ.ಜಿ.ಹಿರೇಮಠ, ಜಿಲ್ಲಾ ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ದರ್ಶನ ಎಚ್.ವ್ಹಿ, ಗದಗ ವಿಶ್ವವಿದ್ಯಾಲಯ ಕರ್ನಾಟಕ ರಾಜ್ಯ ಗ್ರಾಮೀಣ ಅಭಿವೃದ್ದಿ ಹಾಗೂ ಪಂಚಾಯತ್ ರಾಜ್ ಪೆÇ್ರೀ.ವಿಷ್ಣುಕಾಂತ ಎಸ್. ಚಟಪಲ್ಲಿ, ಬೆಳಗಾವಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತದ ಅಧೀಕ್ಷಕ ಅಭಿಯಂತರರಾದ ಸಿ.ಜಿ.ಹುಲಮನಿ, ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕರಾದ ರವಿ ಬಂಗಾರಪ್ಪನವರ ಆಗಮಿಸಲಿದ್ದಾರೆ.
ಬೆಳಗಾವಿ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ಶಿವಾನಂದ, ಚಿಕ್ಕೋಡಿ ಕಾರ್ಯನಿರ್ವಾಹಕ ಅಭಿಯಂತರರಾದ ಆನಂದ ಎಸ್. ಬಣಗಾರ, ಬೈಲಹೊಂಗಲ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸುಭಾಷ ಸಂಪಗಾಂವ, ಸವದತ್ತಿ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಯಶವಂತಕುಮಾರ, ಬೈಲಹೊಂಗಲ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಶಂಕರ ಕೆ. ಮುಗಸಜ್ಜಿ, ಸವದತ್ತಿ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಮ್.ಜಿ.ರೆವಣವರ, ಕೆಂಗಾನೂರ ಗ್ರಾ.ಪಂ.ಅಧ್ಯಕ್ಷರಾದ ದಾನವ್ವ ನಾ. ಛಬ್ಬಿ ಮತ್ತು ಮುರಕಿಭಾವಿ ಗ್ರಾ.ಪಂ.ಅಧ್ಯಕ್ಷರಾದ ಅನಸೂಯಾ ದೊ. ತಳವಾರ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಮುರಗೋಡ ಆರ್.ಡಿ.ಎಸ್ (ಏಖಅ) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿವನಗೌಡ ಬಿ.ಜಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////

 

ಪಿ.ಎಂ. ಕಿಸಾನ್ ಯೋಜನೆಯ ನೆರವು ಪಡೆಯಲು e-ಏಙಅ ಕಡ್ಡಾಯ

 

ಬೆಳಗಾವಿ, : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಹತ್ವಕಾಂಕ್ಷಿ ಯೋಜನೆಯಾದ ಪಿ.ಎಂ.ಕಿಸಾನ್ ಯೋಜನೆಯ ನೆರವು ಪಡೆಯಲು ಏಪ್ರಿಲ್ 2022 ರಿಂದ e-ಏಙಅ ಮಾಡುವುದು ಕಡ್ಡಾಯವಾಗಿದೆ.

e-ಏಙಅ ಏಕೆ ಏಕೆ?
ಪಿ.ಎಂ.ಕಿಸಾನ್ ಯೋಜನೆಯ ನೆರವು ನೈಜ ಫಲಾನುಭವಿಗಳಿಗೆ ದೊರಕುತ್ತಿದೆ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಲು e-ಏಙಅ ಅತ್ಯಂತ ಅವಶ್ಯವಾಗಿರುತ್ತದೆ.
e-ಏಙಅ ಮಾಡಿಕೊಳ್ಳುವುದು ಹೇಗೆ ?
e-ಏಙಅ ಯನ್ನು ಎರಡು ವಿಧಾನÀದಲ್ಲಿ ಕೈಗೊಳ್ಳಬಹುದಾಗಿದೆ. ರೈತರೇ ಖುದ್ದಾಗಿ ಮಾಹಿತಿಯನ್ನ್ಳು ಅಪಲೋಡ್ ಮಾಡುವುದು. ಅSಅ    http://pmkisan.gov.in          ನಾಗರಿಕ ಸೇವಾ ಕೇಂದ್ರಗಳ ಮೂಲಕ ಅಪಲೋಡ್ ಮಾಡುವುದು.
ರೈತರೇ ಖುದ್ದಾಗಿe-KYC ಮಾಹಿತಿಯನ್ನ್ಳು ಅಪಲೋಡ್ ಮಾಡುವುದು ಹೇಗೆ ?
Farmer Corner  ಪೋರ್ಟಲ್‍ನ ಈಚಿಡಿmeಡಿ ಅoಡಿಟಿeಡಿ ನಲ್ಲಿ e-ಏಙಅ ಗೆ ಅವಕಾಶ ಒದಗಿಸಲಾಗಿದೆ. ಈಗಾಗಲೇ ಪಿ.ಎಂ. ಕಿಸಾನ್ ಯೋಜನೆಯಡಿ ಫಲಾನುಭವಿಯಾಗಿರುವ ರೈತರು ಆಧಾರ ಸಂಖ್ಯೆಯನ್ನು, ನಂತರ ಆಧಾರ್ ಸಂಖ್ಯೆಗೆ ನೋಂದಣಿಯಾದ ಮೊಬೈಲ್ ಸಂಖ್ಯೆಯನ್ನು ದಾಖಲಿಸಬೇಕು. ನಂತರ ಮೊಬೈಲ್‍ಗೆ OTP ಯು ರವಾನೆಯಾಗುತ್ತದೆ. ನಂತರ ಸ್ವೀಕರಿಸಿದ ಔಖಿP ಯನ್ನು ದಾಖಲಿಸಿ, SUBMIT FOR AUTH ಎಂಬ ಬಟನ್ ಒತ್ತಬೇಕು. ಆಗ ತಂತ್ರಾಂಶ ಆಧಾರಿತ ಪರಿಶೀಲನೆ ನಡೆದುe-KYC is Successfully Submitted ಎಂಬ ವಾಕ್ಯವು ಗೋಚರಿಸುತ್ತದೆ. ಹೀಗೆ ಮೊಬೈಲ್ ಔಖಿP ಆಧಾರಿತವಾಗಿ ಫಲಾನುಭವಿಯು ಖುದ್ದಾಗಿe-KYC  ಮಾಡಬಹುದಾಗಿದೆ.

ಬಯೋಮೆಟ್ರಿಕ್ ಆಧಾರಿತ್ e-ಏಙಅ ಹೇಗೆ ?
ಯಾವ ಫಲಾನುಭವಿಯ ಮೊಬೈಲ್ ಸಂಖ್ಯೆ ಆಧಾರ್ ಸಂಖ್ಯೆಯೊಂದಿಗೆ ಜೋಡಣೆಯಾಗಿರುವುದಿಲ್ಲವೋ ಅಥವಾ ಯಾರ ಮೊಬೈಲ್ ಸಂಖ್ಯೆಗೆ e-KYC ಗಾಗಿ ಕಳುಹಿಸಿದ OTP ಯು ಸ್ವೀಕೃತವಾಗುವುದಿಲ್ಲವೋ ಅವರು ಅSಅ CSC (Common Service Center) ಸಾಮಾನ್ಯ ಸೇವಾ ಕೆಂದ್ರಗಳು) ಗೆ ತೆರಳಿ ರೂ. 15 ಶುಲ್ಕ ಪಾವತಿಸಿ ಬಯೋಮೆಟ್ರಿಕ್ ಆಧಾರಿತವಾಗಿ e-ಏಙಅ ಮಾಡಬಹುದಾಗಿರುತ್ತದೆ. ಈ ಪ್ರಕ್ರಿಯೆಯಲ್ಲಿ ಕೈ ಬೆರಳಿನ ಗುರುತು ಆಧಾರದ ಮೇಲೆ e-ಏಙಅ ಮಾಡಲಾಗುತ್ತದೆ.
ಈ ಯೋಜನೆಯ ನೆರವನ್ನು ಪಡೆಯಲು ಪ್ರತಿ ಫಲಾನುಭವಿ ರೈತನು e-ಏಙಅ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಕಾರಣ ಯೋಜನೆಯ ನೆರವನ್ನು ಪಡೆಯುತ್ತಿರುವ ರೈತರು 31 ಮಾರ್ಚ 2022 ರೊಳಗೆ e-ಏಙಅ ಮಾಡಿಸಲು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///

ಡಾ. ಬಿ. ಆರ್. ಅಂಬೇಡ್ಕರ್ 131 ನೇ ಜಯಂತಿ ಪೂರ್ವಭಾವಿ ಸಭೆ

ಅಂಬೇಡ್ಕರ್ ಜಯಂತಿ ಅರ್ಥಪೂರ್ಣ ಆಚರಣೆ- ಅಗತ್ಯ ಸಿದ್ದತೆಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೂಚನೆ

 

ಬೆಳಗಾವಿ, : ಭಾರತ ರತ್ನ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಜಯಂತಿ ಆಚರಣೆ ಏಪ್ರಿಲ್ 14 ರಂದು ನಡೆಯಲಿದ್ದು, ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ನಡೆಸಲು ಅಧಿಕಾರಿಗಳು ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಅವರು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ (ಮಾ.21) ನಡೆದ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಡಾ. ಬಾಬಾಸಾಹೇಬ ಅಂಬೇಡ್ಕರ್ ಉದ್ಯಾನವನದಲ್ಲಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಅಂಬೇಡ್ಕರ್ ಜಯಂತಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಡಾ.ಬಿ.ಆರ್ ಅಂಬೇಡ್ಕರ್ ಉದ್ಯಾನವನದಲ್ಲಿ ಮುಖ್ಯ ಕಾರ್ಯಕ್ರಮ ಆಯೋಜಿಸಲು ಕಾರ್ಯಕ್ರಮಕ್ಕೆ ಅವಶ್ಯವಿರುವ ಪೆಂಡಾಲ್, ವೇದಿಕೆ, ಆಸನಗಳ ವ್ಯವಸ್ಥೆಯನ್ನು ಸಮರ್ಪಕವಾಗಿ ಕಲ್ಪಿಸಬೇಕು ಹಾಗೂ ಉದ್ಯಾನವನವನ್ನು ಸ್ವಚ್ಛಗೊಳಿಸಬೇಕು ಎಂದು ಹೇಳಿದರು.
ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ರಸ್ತೆಗೆ ದೀಪಾಲಂಕಾರ ಹಾಗೂ ನಗರದ ಪ್ರಮುಖ ವೃತ್ತಗಳನ್ನು ಅಲಂಕರಿಸಿ ಬ್ಯಾನರ್ ಕಟ್ಟುವ ವ್ಯವಸ್ಥೆ ಮಾಡಬೇಕು ಎಂದು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಸಲು ಅಂಬೇಡ್ಕರ್ ಅವರ ಜೀವನ ಚರಿತ್ರೆ ಹಾಗೂ ಆದರ್ಶಗಳ ಬಗ್ಗೆ ಆಳವಾಗಿ ಅಧ್ಯಯನ ಮಾಡಿದ ಉಪನ್ಯಾಸಕರ ಆಯ್ಕೆ ಮಾಡಬೇಕು ಎಂದು ಅಂಬೇಡ್ಕರ್ ಸಂಘಟನೆಯ ಮುಖಂಡರಿಗೆ ತಿಳಿಸಿದರು.
ಧರ್ಮವೀರ ಸಂಭಾಜಿ ವೃತ್ತದಿಂದ, ಕಿರ್ಲೋಸ್ಕರ್ ರೋಡ್ ರಾಮದೇವ ಗಲ್ಲಿ, ಖಡೆಬಜಾರ್ ಮಾರ್ಗವಾಗಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಉದ್ಯಾನವನದ ವರೆಗೆ ರೂಪಕ ವಾಹನಗಳ ಮೆರವಣಿಗೆ ಮಾಡಲಾಗುವುದು.
ಜಯಂತಿ ಆಚರಣೆ ದಿನದಂದು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಉದ್ಯಾನವನದಲ್ಲಿ ಬೆಳಿಗ್ಗೆ ಅಲ್ಪೋಪಹಾರ ಹಾಗೂ ಕುಡಿಯುವ ನೀರು, ಊಟದ ವ್ಯವಸ್ಥೆ ಕಲ್ಪಿಸಲಾಗುವುದು. ಕಲಾ ಪ್ರದರ್ಶನಕ್ಕಾಗಿ ಸ್ಥಳೀಯ 10 ಉತ್ತಮ ಕಲಾ ತಂಡಗಳನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದರು.
ಜಿಲ್ಲೆಯ ಶಾಲಾ ಕಾಲೇಜು, ಗ್ರಾಮ ಪಂಚಾಯತ ಮತ್ತು ಸಹಕಾರ ಸಂಘ ಸಂಸ್ಥೆಗಳಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಆಚರಿಸಲಾಗುವುದು. ಖಾಸಗಿ ಶಾಲಾ ಕಾಲೇಜುಗಳಲ್ಲಿ ಕೂಡ ಜಯಂತಿ ಆಚರಣೆ ಕಡ್ಡಾಯವಾಗಿರುತ್ತದೆ.
ಪ್ರತಿವರ್ಷದಂತೆ ಜಯಂತಿ ಆಚರಣೆ ದಿನದಂದು ಮಧ್ಯಪಾನ ಮಾರಾಟ ನಿμÉೀಧಿಸಲಾಗುವುದು. ಜಯಂತಿ ಪ್ರಯುಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 5 ಎಸೆಸೆಲ್ಸಿ ಹಾಗೂ 5 ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು.
ಮಹಾನಗರ ಪಾಲಿಕೆ ಆಯುಕ್ತರಾದ ರುದ್ರೇಶ್ ಘಾಳಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಡಾ. ಉಮಾ ಸಾಲಿಗೌಡರ, ಡಿ.ಸಿ.ಪಿ ರವೀಂದ್ರ ಗಡಾದಿ ಹಾಗೂ ವಿವಿಧ ಸಂಘಟನೆ ಕಾರ್ಯಕರ್ತರು, ಸಮಾಜದ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.////