Belagavi News In Kannada | News Belgaum

28 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

ಬೆಳಗಾವಿ;  2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ನಡೆಸಲಾಗುತ್ತಿದ್ದು ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳುವುದಕ್ಕೆ ಮತ್ತು ಹಿಂದಿರುಗುವುದಕ್ಕೆ ಅನುಕೂಲವಾಗಲಿ ಎಂದು ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.

ಜಿಲ್ಲೆಯ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಎಸ್.ಎಸ್.ಎಲ್.ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.