Belagavi News In Kannada | News Belgaum

ಕಳ್ಳತನ ಮಾಡಿದ್ದ 6 ಆಟೋ ಜಪ್ತಿ

ಬೆಂಗಳೂರು: ಮನೆಗಳ ಮುಂದೆ ನಿಲ್ಲಿಸಿದ್ದಂತಹ ಆಟೋ ರಿಕ್ಷಾಗಳನ್ನು ಕಳ್ಳತನ ಮಾಡುತ್ತಿದ್ದವನನ್ನು ಕೆಂಗೇರಿ ಠಾಣೆ ಪೊಲೀಸರು ವಶಕ್ಕೆ ಪಡೆದು 15 ಲಕ್ಷ ರೂ. ಬೆಲೆಯ 6 ಆಟೋರಿಕ್ಷಾಗಳನ್ನು ವಶಪಡಿಸಿಕೊಂಡಿದ್ದಾರೆ.

ಮಾರ್ಚ್ 11 ರಂದು ರಾತ್ರಿ 11 ಗಂಟೆ ಸುಮಾರಿನಲ್ಲಿ ಪಿರ್ಯಾದುದಾರರು ಆಟೋರಿಕ್ಷಾವನ್ನು ಮನೆಯ ಮುಂದೆ ನಿಲ್ಲಿಸಿದ್ದಾಗ ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದ ಬಗ್ಗೆ ಕೆಂಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಇನ್ಸ್‍ಪೆಕ್ಟರ್ ವಸಂತ್ ಹಾಗೂ ಸಿಬ್ಬಂದಿ ತನಿಖೆ ಕೈಗೊಂಡು ಕಾನೂನಿನ ಸಂಘರ್ಷಕ್ಕೊಳಗಾದ ಒಬ್ಬನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಕೆಂಗೇರಿ, ಕಾಮಾಕ್ಷಿಪಾಳ್ಯ, ಕಾಟನ್‍ಪೇಟೆ, ಚಂದ್ರಾಲೇಔಟ್, ಕುಂಬಳಗೋಡು ಹಾಗೂ ಶೇಷಾದ್ರಿಪುರಂ ಪೊಲೀಸ್ ಠಾಣಾ ಸರಹದ್ದಿನಲ್ಲಿ ಆಟೋರಿಕ್ಷಾಗಳನ್ನು ಕಳವು ಮಾಡಿರುವುದಾಗಿ ಆತ ವಿಚಾರಣೆ ವೇಳೆ ಹೇಳಿದ್ದಾನೆ.

ಆತನ ಮಾಹಿತಿ ಮೇರೆಗೆ ಸುಮಾರು 15 ಲಕ್ಷ ರೂ. ಬೆಲೆಯ 6 ಆಟೋ ರಿಕ್ಷಾ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.