Belagavi News In Kannada | News Belgaum

ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಮುಂದುವರಿಕೆ

ಬೆಂಗಳೂರು:ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನು ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಲ ಕೊಲ್ಲಿಯ ಅಸನಿ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆ ಇನ್ನು ಮೂರು ದಿನಗಳ ಕಾಲ ಮುಂದುವರೆಯಲಿದೆ.
ನಿನ್ನೆ ರಾಜಧಾನಿ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಚಿಕ್ಕಮಗಳೂರು, ಹಾಸನ , ಕೊಡಗು ಮತ್ತು ಶಿವಮೊಗ್ಗದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗುವ ಸಂಭವವಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ನಾಳೆ ಮಳೆಯಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಹಾಗೂ ಮೈಸೂರು, ಮಂಡ್ಯ, ರಾಮನಗರದಲ್ಲಿ ಮಾ.24ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಬೀಳಲಿದೆ.