Belagavi News In Kannada | News Belgaum

ಮಾ.24 ರಂದು ವಿಶ್ವ ಕ್ಷಯರೋಗ ದಿನಾಚರಣೆ

ಮಾ.24 ರಂದು ವಿಶ್ವ ಕ್ಷಯರೋಗ ದಿನಾಚರಣೆ

 

ಬೆಳಗಾವಿ, ಮಾರ್ಚ್ 22 : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸಂಘ, ಕ್ಷಯರೋಗ ನಿಯಂತ್ರಣ ವಿಭಾಗ ಹಾಗೂ ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 24 (ಗುರುವಾರ)ರಂದು ಬೆಳಗಾವಿಯ ಜೆ.ಎನ್.ಎಮ್.ಸಿ ಕ್ಯಾಂಪಸ್‍ನ ಪ್ರೊ. ಡಾ. ಬಿ.ಎಸ್.ಕೋಡಕಿಣಿ ಸಭಾ ಭವನದಲ್ಲಿ ಬೆಳಿಗ್ಗೆ 10.30 ಗಂಟೆಗೆ ವಿಶ್ವ ಕ್ಷಯರೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
“ಟಿ.ಬಿ ಯನ್ನು ಕೊನೆಗೊಳಿಸಲು ಹೂಡಿಕೆ ಮಾಡಿ ಜೀವಗಳನ್ನು ಉಳಿಸಿ” ಅನ್ನುವ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿರುವ ಈ ಕ್ಷಯರೋಗ ದಿನಾಚರಣೆಯನ್ನು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಅರಣ್ಯ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಉಮೇಶ ಕತ್ತಿ, ಮುಜರಾಯಿ, ಹಜ್ ಹಾಗೂ ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಭಾಗಿಯಾಗಲಿದ್ದು, ಬೆಳಗಾವಿ ಉತ್ತರ ವಲಯದ ಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಶೇಷ ಆಮಂತ್ರಿತರಾಗಿ ವಿಧಾನಸಭೆ ಉಪ ಸಭಾಧ್ಯಕ್ಷರಾದ ವಿಶ್ವನಾಥ(ಆನಂದ) ಮಾಮನಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಮಹೇಶ ಕುಮಠಳ್ಳಿ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ದುರ್ಯೋಧನ ಐಹೊಳೆ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷಕರಾದ ಪಿ.ರಾಜೀವ ಆಗಮಿಸಲಿದ್ದಾರೆ.
ಗೌರವಾನ್ವಿತ ಅತಿಥಿಗಳಾಗಿ ಉತ್ತರ ಕನ್ನಡ ಲೋಕಸಭಾ ಸದಸ್ಯರಾದ ಅನಂತಕುಮಾರ ಹೆಗಡೆ, ಚಿಕ್ಕೋಡಿ ಲೋಕಸಭಾ ಸದಸ್ಯರಾದ ಅಣ್ಣಾಸಾಹೇಬ ಜೊಲ್ಲೆ, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ, ಬೆಳಗಾವಿ ಲೋಕಸಭಾ ಸದಸ್ಯರಾದ ಮಂಗಲ ಅಂಗಡಿ, ಯಮಕನಮರಡಿ ಶಾಸಕರಾದ ಸತೀಶ ಜಾರಕಿಹೊಳಿ, ಗೋಕಾಕ ಶಾಸಕರಾದ ರಮೇಶ ಜಾರಕಿಹೊಳಿ, ಅರಭಾವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ಜಿಲ್ಲೆಯ ವಿಧಾನಸಭೆ, ವಿಧಾನಪರಿಷತ್ ಸದಸ್ಯರು ನಿಗಮ, ಮಂಡಳಿಗಳ ಅಧ್ಯಕ್ಷರು ಭಾಗಿಯಾಗಲಿದ್ದಾರೆ.
ಜಿಲ್ಲಾಧಿಕಾರಿಗಳಾದ ಎಂ.ಜಿ.ಹಿರೇಮಠ, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್, ಉತ್ತರ ವಲಯದ ಆರಕ್ಷಕ ಮಹಾನಿರೀಕ್ಷಕರಾದ ಎನ್.ಸತೀಶಕುಮಾರ್, ನಗರ ಪೊಲೀಸ್ ಆಯುಕ್ತರಾದ ಎಂ.ಬಿ.ಬೋರಲಿಂಗಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಣಣ ನಿಂಬರಗಿ, ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿಗಳಾದ ದರ್ಶನ ಎಚ್.ವ್ಹಿ ಭಾಗವಹಿಸಲಿದ್ದು, ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯರು, ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಬೆಳಗಾವಿ ಜಿಲ್ಲಾ ಕ್ಷಯರೋಗ ನಿಯಂತ್ರಣ ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.////

ಮಿರ್ಜಿ ಅಣ್ಣಾರಾಯರ ಸಾಹಿತ್ಯ ಸಾಧನೆ: ಮಾ.25 ರಂದು ಉಪನ್ಯಾಸ

 

ಬೆಳಗಾವಿ,  : ಇಲ್ಲಿಯ ಭರತೇಶ ಶಿಕ್ಷಣ ಸಂಸ್ಥೆಯ ಆವರಣದಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಯಲದ ಡಾ.ಆ.ನೇ.ಉಪಾಧ್ಯೆ ವಿಸ್ತರಣ ಕೇಂದ್ರದಲ್ಲಿ ಮಾರ್ಚ್25 ರಂದು ಸಂಜೆ 4 ಗಂಟೆಗೆ ಬೆಳಗಾವಿಯ ಹಿರಿಯ ವಿದ್ವಾಂಸರಾದ ಡಾ.ಪಿ.ಜಿ. ಕೆಂಪಣ್ಣವರ ಅವರು ಮಿರ್ಜಿ ಅಣ್ಣಾರಾಯರ ಸಾಹಿತ್ಯ ಸಾಧನೆ ಎಂಬ ವಿಷಯನ್ನು ಕುರಿತಾಗಿ ವಿಶೇಷ ಉಪನ್ಯಾಸವನ್ನು ನೀಡಲಿದ್ದಾರೆ.
ಕನ್ನಡ ವಿಶ್ವವಿದ್ಯಾಲಯ ಕುಲಪತಿಗಳಾದ ಡಾ.ಸ.ಚಿ.ರಮೇಶ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಭರತೇಶ ಶಿಕ್ಷಣ ಸಂಸ್ಥೆಯ ಅಧ್ಯಕರಾದ ಡಾ. ಜಿನದತ್ತ ದೇಸಾಯಿ ಅವರು ಉಪಸ್ಥಿತ ಇರಲಿದ್ದಾರೆ. ಕನ್ನಡ ವಿಶ್ವವಿದ್ಯಾಲಯದ ಕಾರ್ಯಕಾರಿ ಸಮಿತಿ ಸದಸ್ಯರಾದ ಪ್ರೊ. ಹೆಚ್.ಎಂ.ಚನ್ನಪ್ಪಗೋಳ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕೇಂದ್ರದ ಮುಖ್ಯಸ್ಥರಾದ ಡಾ.ಎಸ್.ಎಸ್. ಅಂಗಡಿ ಅವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಅಂದು (ಮಾರ್ಚ್ 25) ನಡೆಯಲಿರುವ ಈ ಕಾರ್ಯಕ್ರಮಕ್ಕೆ ಎಲ್ಲರೂ ಭಾಗವಹಿಸಬೇಕು ಎಂದು ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///

ಮನೆ ನಿರ್ಮಾಣ: ಅರ್ಜಿ ಆಹ್ವಾನ

 

ಬೆಳಗಾವಿ, : ಅಂಕಲಗಿ-ಅಕ್ಕತಂಗೇರಹಾಳ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ 2021-22 ನೇ ಸಾಲಿನ ವಾಜಪೇಯಿ ನಗರ ವಸತಿ ಯೋಜನೆ ಮತ್ತು ಡಾ|| ಬಿ.ಆರ್. ಅಂಬೇಡ್ಕರ ನಗರ ನಿವಾಸ್ ಯೋಜನೆಯಡಿಯಲ್ಲಿ ನಿವೇಶನ ಹೊಂದಿದ ಫಲಾನುಭವಿಗಳಿಗೆ ವಸತಿ ಕಲ್ಪಿಸಲು ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ವಾಜಪೇಯಿ ನಗರ ವಸತಿ ಯೋಜನೆಯಡಿಯಲ್ಲಿ ಸಾಮಾನ್ಯ ಹಾಗೂ ಅಲ್ಪ ಸಂಖ್ಯಾತರಿಗೆ ಸೇರಿ ಒಟ್ಟು 38 ಹಗೂ ಡಾ. ಬಿ.ಆರ್.ಅಂಬೇಡ್ಕರ್ ನಿವಾಸ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿ ಒಟ್ಟು 21 ಮನೆಗಳು ಮಂಜೂರಾಗಿದ್ದು ಫಲಾನುಭವಿಗಳು ಸೂಕ್ತದಾಖಲಾತಿಗಳೊಂದಿಗೆ ಏಪ್ರಿಲ್ 5ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಸಲ್ಲಿಸಬೇಕಾದ ದಾಖಲಾತಿಗಳು:
ಚಾಲ್ತಿ ವರ್ಷದ ಜಾತಿ ಮತ್ತು ಆಧಾಯ ಪ್ರಮಾಣ ಪತ್ರ(ಕಡ್ಡಾಯ), ನಿವೇಶನದ ಖಾತಾ ಝರಾಕ್ಸ ಪ್ರತಿ(ಕಡ್ಡಾಯ), ಆಧಾರ ಕಾರ್ಡ (ಫಲಾನುಭವಿ ಮತ್ತು ಕುಟುಂಬ ಸದಸ್ಯರು) (ಕಡ್ಡಾಯ), ರೇಶನ ಕಾರ್ಡ (ಕಡ್ಡಾಯ), ಅರ್ಜಿದಾರರ ಬ್ಯಾಂಕ್ ಪಾಸ ಬುಕ್ ಝರಾಕ್ಸ (ಕಡ್ಡಾಯ), ಮತದಾರರ ಗುರುತಿನ ಚೀಟಿ ಝರಾಕ್ಸ (ಕಡ್ಡಾಯ), 20ರೂ. ಬಾಂಡ (ವಸತಿ ಯೋಜನೆಯಲ್ಲಿ ಯಾವುದೇ ಸೌಲಭ್ಯ ಪಡೆದಿರುವದಿಲ್ಲ ಬಗ್ಗೆ ಪ್ರಮಾಣ ಪತ್ರ.(ಕಡ್ಡಾಯ).
ಹೆಚ್ಚಿನ ಮಾಹಿತಿಗಾಗಿ ಪಟ್ಟಣ ಪಂಚಾಯಿತಿಯನ್ನು ಸಂಪರ್ಕಿಸಬಹುದು ಎಂದು ಮುಖ್ಯಾಧಿಕಾರಿ ಬಸವರಾಜ ಮನಗೂಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///