Belagavi News In Kannada | News Belgaum

ಗ್ರಾಹಕರಿಗೆ ಕರೆಂಟ್‌ ಶಾಕ್‌ : ಏ. 1 ರಿಂದಲೇ ವಿದ್ಯುತ್ ದರ ಏರಿಕೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ 1 ರಿಂದ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆಯಿದೆ. 1 ಯೂನಿಟ್ ಗೆ 35 ರಿಂದ 45 ಪೈಸೆಯಷ್ಟು ಏರಿಕೆಯಾಗುವ ಸಾಧ್ಯತೆಯಿದೆ.

ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ ಸೇರಿದಂತೆ ಇತರೆ ವಿದ್ಯುತ್ ಪೂರೈಕೆ ಕಂಪನಿಗಳು ಪ್ರತಿ ಯೂನಿಟ್ ಗೆ 1.50 ರೂಪಾಯಿಗಳ ಏರಿಕೆ ಮಾಡುವಂತೆ KERCಗೆ ಪ್ರಸ್ತಾವನೆಯನ್ನು ಸಲ್ಲಿಸಿವೆ.

ವಿದ್ಯುತ್ ಸರಬರಾಜು ಕಂಪನಿಗಳಿಂದ ತೀವ್ರ ಒತ್ತಡ ಹಿನ್ನೆಲೆಯಲ್ಲಿ ಏಇಖಅ ವಿದ್ಯುತ್ ದರ ಪರಿಷ್ಕರಣೆ ಮುಂದಾಗಿದೆ.ಶೀಘ್ರದಲ್ಲಿಯೇ ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.