Belagavi News In Kannada | News Belgaum

11 ತಿಂಗಳ ಹಿಂದೆಯೇ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಆಗ್ರಹಿಸಿದ್ದರು. ಈಗ ಸರ್ಕಾರ ತನಿಖೆಗೆ ಆದೇಶ ಹೊರಡಿಸಿದ್ದು, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಹಗರಣ ನಡಿದಿದೆ ಎಂದು ಶಾಸಕ ಸಾ.ರಾ.ಮಹೇಶ್ ಅವರು 11 ತಿಂಗಳ ಹಿಂದೆಯೇ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಆಗ್ರಹಿಸಿದ್ದರು. ಈಗ ಸರ್ಕಾರ ತನಿಖೆಗೆ ಆದೇಶ ಹೊರಡಿಸಿದ್ದು, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ ಎದುರಾಗಿದೆ.

ಸಾರ್ವಜನಿಕರ ತೆರಿಗೆ ಹಣವನ್ನು ರೋಹಿಣಿ ಸಿಂಧೂರಿ ದುಂದುವೆಚ್ಚ ಮಾಡಿದ್ದಾರೆ ಎಂದು ಶಾಸಕ ಸಾ.ರಾ.ಮಹೇಶ್ ಅವರು 11 ತಿಂಗಳ ಹಿಂದೆಯೇ ತನಿಖೆಗೆ ಆಗ್ರಹಿಸಿದ್ದರು.

ಪ್ರಕರಣದ ಹಿನ್ನೆಲೆ : ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿಯವರ ಅವಧಿಯಲ್ಲಿ ಪೂರ್ವಾನುಮತಿ ಇಲ್ಲದೆ 14.71 ಲಕ್ಷ ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ಗಳನ್ನು 14 ಕೋಟಿ ರೂ.ಗೆ ಖರೀದಿ ಮಾಡಿದ್ದರು. ಅಲ್ಲದೇ ಚಿಲ್ಲರೆ ಮಾರುಕಟ್ಟೆಯಲ್ಲಿ 10ರಿಂದ 13 ರೂ.ಗೆ ದೊರೆಯುವ ಪ್ರತಿ ಬ್ಯಾಗ್ಗೆ 52 ರೂ. ಕೊಡಲಾಗಿದೆ.

ಕೈಮಗ್ಗ ನಿಗಮ ಬಿಟ್ಟು ಖಾಸಗಿ ವ್ಯಕ್ತಿಗೆ ಟೆಂಡರ್ ನೀಡಿ ರೋಹಿಣಿ ಸಿಂಧೂರಿ ಕಿಕ್ ಬ್ಯಾಕ್ ಪಡೆದಿದ್ದಾರೆ. ಪರಿಸರ ಸ್ನೇಹಿ ಬಟ್ಟೆಬ್ಯಾಗ್ ಖರೀದಿ ನೆಪದಲ್ಲಿ ಒಟ್ಟು 14 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಎನ್ನಲಾಗುತ್ತಿದ್ದು, ಶಾಸಕ ಸಾ.ರಾ.ಮಹೇಶ್ ಅವರು 11 ತಿಂಗಳ ಹಿಂದೆಯೇ ತನಿಖೆಗೆ ಆಗ್ರಹಿಸಿದ್ದರು.ಇದೀಗ ತನಿಖೆ ನಡೆಸಿ ವರದಿ ನೀಡುವಂತೆ ಈಗಿನ ಮೈಸೂರು ಜಿಲ್ಲಾಧಿಕಾರಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.