Belagavi News In Kannada | News Belgaum

ಜಮೀನಿಗೆ ನೀರು ಹಾಯಿಸಲು ಹೋದ ವೇಳೆ ವಿದ್ಯುತ್ ತಂತಿ ತಗುಲಿ ರೈತ ಸಾವು

ಹರಪನಹಳ್ಳಿ: ಜಮೀನಿಗೆ ನೀರು ಹಾಯಿಸಲು ಹೋಗಿದ್ದ ವೇಳೆ ವಿದ್ಯುತ್‌ ತಂತಿ ತಗುಲಿ ರೈತನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಯಡಿಹಳ್ಳಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಹೊಳಲು ಜಂಬಪ್ಪ(48) ಮೃತ ದುರ್ದೈವಿ ತಮ್ಮ ಹೊಲದಲ್ಲಿನ ಈರುಳ್ಳಿ ಬೆಳೆಗೆ ನೀರು ಹಾಯಿಸಲು ಹೋಗಿದ್ದ ಸಂದರ್ಭದಲ್ಲಿ ಮೋಟಾರ್ ಆನ್ ಮಾಡುವ ವೇಳೆ ಮೋಟಾರ್ ಗೆ ಸಂಪರ್ಕ ಕಲ್ಪಿಸಿರುವ ವಿದ್ಯುತ್ ತಂತಿ ತಗುಲಿದ ಪರಿಣಾಮ ರೈತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು ಮೃತರಿಗೆ ಪತ್ನಿ ಇಬ್ಬರೂ ಪುತ್ರರು ಸೇರಿ ಅಪಾರ ಬಂಧು ಬಳಗ ಅಗಲಿದ್ದಾರೆ.
ಮೃತ ಹೊಳಲು ಜಂಬಪ್ಪ ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು, ಶಾಸಕ ಕರುಣಾಕರ ರೆಡ್ಡಿಯವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು ಎನ್ನಲಾಗಿದೆ. ಈ ಕುರಿತು ಹಲುವಾಗಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.//////