Belagavi News In Kannada | News Belgaum

ಹಿಜಾಬ್‌ ಧರಿಸಿ ಬಂದರೆ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಅವಕಾಶವಿಲ್ಲ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌

ಬೆಂಗಳೂರು: ರಾಜ್ಯದಲ್ಲಿ ಸೋಮವಾರದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಸೆ ಆರಂಭವಾಗಲಿದೆ. ಇದಕ್ಕೆ ಎಲ್ಲಾ ಸಿದ್ಧತೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಹಿಜಾಬ್‌ ವಿವಾದ ಕುರಿತಂತೆ ಮಾತನಾಡಿದ ಅವರು, ಹಿಜಾಬ್‌ ಧರಿಸಿ ಬಂದರೆ ಪರೀಕ್ಷೆ ಬರೆಯಲು ಅವಕಾಶವಿಲ್ಲ. ಇದನ್ನು ವಿದ್ಯಾರ್ಥಿಯನಿಯರು ಗಮನದಲ್ಲಿ ಇರಿಸಿಕೊಳ್ಳಬೇಕು. ನ್ಯಾಯಾಲಯ ಆದೇಶವನ್ನು ಪ್ರತಿಯೊಬ್ಬರೂ ಪಾಲಿಸಬೇಕು   ಎಂದು ಸಚಿವ ಬಿ.ಸಿ ನಾಗೇಶ್‌ ಮನವಿ ಮಾಡಿದ್ದಾರೆ./////