Belagavi News In Kannada | News Belgaum

ಚಲಿಸುತ್ತಿದ್ದ ಬಸ್​ನಲ್ಲಿ ಎಣ್ಣೆ ಹೊಡೆದ ವಿದ್ಯಾರ್ಥಿನಿಯರು

ಚೆನ್ನೈ: ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ ಚಲಿಸುತ್ತಿದ್ದ ಬಸ್​ನಲ್ಲಿ ಶಾಲಾ ವಿದ್ಯಾರ್ಥಿಗಳು ಮದ್ಯ ಸೇವಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್​ ಮಾಡಿರುವ ಈ ವಿಡಿಯೋವನ್ನು ವಿದ್ಯಾರ್ಥಿಯೊಬ್ಬ ರೆಕಾರ್ಡ್​ ಮಾಡಿದ್ದಾನೆಂದು ತಿಳಿದುಬಂದಿದೆ.  ಹುಡುಗಿಯರು ಮತ್ತು ಹುಡುಗರ ಗುಂಪೊಂದು ಶಾಲಾ ಸಮವಸ್ತ್ರದಲ್ಲೇ ಬಸ್​ನಲ್ಲಿ ಬಿಯರ್​ ಸೇವಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಎಲ್ಲ ವಿದ್ಯಾರ್ಥಿಗಳು ಚೆಂಗಲ್ಪಟ್ಟು ಸರ್ಕಾರಿ ಶಾಲೆಯವರು ಎಂದು ನಂಬಲಾಗಿದೆ.
ಆರಂಭದಲ್ಲಿ ಇದನ್ನು ಹಳೇ ವಿಡಿಯೋ ಎಂದು ನಂಬಲಾಗಿತ್ತು. ಆದರೆ, ಈ ಘಟನೆ ಕಳೆದ ಮಂಗಳವಾರ ನಡೆದಿರುವುದಾಗಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳು ತಿರುಕಝುಕುಂದ್ರಂನಿಂದ ತಾಚೂರ್‌ಗೆ ತೆರಳುತ್ತಿದ್ದ ಬಸ್‌ನಲ್ಲಿದ್ದರು ಎಂದು ತಿಳಿದುಬಂದಿದೆ.
ಈ ಘಟನೆಯನ್ನು ಗಮನಿಸಿರುವ ಜಿಲ್ಲಾ ಶಿಕ್ಷಣಾಧಿಕಾರಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಪೊಲೀಸ್​ ತನಿಖೆಯನ್ನು ಕೈಗೊಳ್ಳಲಾಗಿದೆ. ತನಿಖೆ ಪೂರ್ಣಗೊಂಡ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ./////