Belagavi News In Kannada | News Belgaum

ಏ. 1ರಂದು ರಾಜ್ಯಕ್ಕೆ ಅಮಿತ್ ಷಾ ಭೇಟಿ; ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಬೆಂಗಳೂರು : ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 4 ರಾಜ್ಯಗಳಲ್ಲಿ ಭರ್ಜರಿ ಜಯ ಗಳಿಸಿದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏಪ್ರಿಲ್ 1ರಂದು ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ವಿಧಾನಸಭೆ ಚುನಾವಣೆಗೆ ಒಂದು ವರ್ಷ ಮುಂಚಿತವಾಗಿ ಅವರು ರಾಜ್ಯದಲ್ಲಿ ಕೇಸರಿ ಪಕ್ಷದ ಪ್ರಚಾರವನ್ನು ಪ್ರಾರಂಭಿಸುವ ಸಾಧ್ಯತೆಯಿದೆ.ಅಲ್ಲದೆ ರಾಜ್ಯದ ಪ್ರಮುಖ ಲಿಂಗಾಯತ ಧಾರ್ಮಿಕ ಸಂಸ್ಥೆಯಾದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಗಳ 116ನೇ ಜಯಂತಿಯಲ್ಲಿ ಅಮಿತ್ ಶಾ ಭಾಗವಹಿಸಲಿದ್ದಾರೆ.

ಇದೇ ವೇಳೆ ಕರ್ನಾಟಕದ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಅವರು ಅರಮನೆ ಮೈದಾನದಲ್ಲಿ ಆಯೋಜಿಸಿರುವ ಬೃಹತ್ ಕಾರ್ಯಕ್ರಮದಲ್ಲಿ ದೇಶದ ಮೊದಲ ಸಹಕಾರ ಸಚಿವ ಅಮಿ ಶಾ ಅವರು ಭಾಗವಹಿಸುವ ಸಾಧ್ಯತೆ ಇದೆ.

ಅಮಿತ್ ಶಾ ಅವರ ರಾಜ್ಯ ಭೇಟಿ ಈಗಾಗಲೇ ಬಿಜೆಪಿ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟ ಪುನಾರಚನೆಗೆ ಮತ್ತು ನಿಗಮ ಮಂಡಳಿ ನೇಮಕ ಪಟ್ಟಿಗೆ ಒಪ್ಪಿಗೆ ನೀಡುತ್ತಾರೆ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ./////