Belagavi News In Kannada | News Belgaum

ಪುರಸಭೆಯ ಕಚೇರಿಯಲ್ಲಿಯೇ ಹುಟ್ಟುಹಬ್ಬ ಆಚರಣೆ ಮಾಡಿಕೊಂಡು ಸರ್ಕಾರದ ನಿಯಮ ಉಲ್ಲಂಘಣೆ

ಗೋಕಾಕ :- ತಾಲೂಕಿನ ಘಟಪ್ರಭಾ ಪುರಸಭೆಯ ಮುಖ್ಯಾಧಿಕಾರಿ ಕೆ.ಬಿ ಪಾಟೀಲ ಅವರು ಪುರಸಭೆಯ ಕಚೇರಿಯಲ್ಲಿಯೇ ಹುಟ್ಟುಹಬ್ಬ ಆಚರಣೆ ಮಾಡಿಕೊಂಡು ಸರ್ಕಾರದ ನಿಯಮ ಉಲ್ಲಂಘಣೆ ಮಾಡಿರುವ ಆರೋಪ ಕೇಳಿಬರುತ್ತಿದೆ.
ಯಾವುದೇ ಸರಕಾರಿ ಇಲಾಖೆಯಲ್ಲಿ ಅಧಿಕಾರಿಗಳು ಮೋಜು, ಮಸ್ತಿ, ಹುಟ್ಟುಹಬ್ಬ, ಇತರೇ ಖಾಸಗಿ ಕಾರ್ಯಕ್ರಮ ಆಚರಣೆ ಮಾಡಿಕೊಳ್ಳಬಾರದು ಎಂದು ಸರ್ಕಾರದ ನಿಯಮವಿದ್ದರೂ ಕೂಡ ಘಟಪ್ರಭಾ ಪುರಸಭೆ ಮುಖ್ಯಾಧಿಕಾರಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿರುವ ಪೋಟೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದಕ್ಕೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಕಚೇರಿ ಹಾಗೂ ಅಧಿಕಾರಿಗಳು ಸಾರ್ವಜನಿಕರ ಕೆಲಸ ಮಾಡಲಿ ಎಂದು ಇರುವಂತದ್ದು, ಅಂತಹದರಲ್ಲಿ ಕೆಲಸದ ಸಮಯದಲ್ಲಿ ಈ ರೀತಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎಂಬುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ ಇನ್ನು ಈ ಘಟನೆ ಬಗ್ಗೆ ಸಂಬಂಧಿಸಿದ ಮೇಲಾಧಿಕಾರಿಗಳು ಯಾವ ರೀತಿ ಕ್ರಮ ಕೈಗುಳ್ಳುತ್ತಾರೆ ಎಂದು ಕಾದು ನೋಡಬೇಕಾಗಿದೆ.