ಮಹದಾಯಿ ಯೋಜನೆ ಅನುಷ್ಠಾನಕ್ಕಾಗಿ ಟ್ರಾಕ್ಟರ್ ರ್ಯಾಲಿ ಮಾಡಲು ಕಾಂಗ್ರೆಸ್ ತೀರ್ಮಾನ

ಬೆಂಗಳೂರು: ಮಹದಾಯಿ ಯೋಜನೆ ಅನುಷ್ಠಾನಕ್ಕಾಗಿ ಮೇ ನಲ್ಲಿ ಉತ್ತರ ಕರ್ನಾಟಕದಲ್ಲಿ ಟ್ರಾಕ್ಟರ್ ರ್ಯಾಲಿ ನಡೆಸಲು ಕಾಂಗ್ರೆಸ್ ತೀರ್ಮಾನಿಸಿದೆ.
ಮಹದಾಯಿ ಹೋರಾಟಕ್ಕಾಗಿ ಮಾಜಿ ಸಚಿವ ಎಚ್.ಕೆ. ಪಾಟೀಲ್ ನೇತೃತ್ವದಲ್ಲಿ ಉತ್ತರ ಕರ್ನಾಟಕ ಭಾಗದ ಶಾಸಕರು ಮುಖಂಡರ ಸಭೆ ನಡೆಯಿತು.
ಬಳಿಕ ಮಾತನಾಡಿದ ಹಿರಿಯ ನಾಯಕ ಹೆಚ್.ಕೆ. ಪಾಟೀಲ್, ಮಹದಾಯಿ ಯೋಜನೆ ಅನುಷ್ಠಾನಕ್ಕಾಗಿ ಹೋರಾಟ ಮಾಡಲು ನಿರ್ಧಾರ ಮಾಡಿದ್ದೇವೆ. ಉತ್ತರ ಕರ್ನಾಟಕ ಭಾಗದ ಜನರ ಉಸಿರು ಮಹದಾಯಿಗಾಗಿ ಹೋರಾಟ ಮಾಡುತ್ತಿದ್ದೇವೆ ಎಂದರು.
ಮಹದಾಯಿ ಅನುಷ್ಠಾನಕ್ಕಾಗಿ ಪಾದಯಾತ್ರೆ ಮಾಡಬೇಕೋ, ಟ್ರ್ಯಾಕ್ಟರ್ ರ್ಯಾಲಿ ಮಾಡಬೇಕೋ ಗೊತ್ತಿಲ್ಲ. ಉತ್ತರ ಕರ್ನಾಟಕ ಭಾಗದ ಜನಪ್ರತಿನಿಧಿಗಳು ಟ್ರ್ಯಾಕ್ಟರ್ ರ್ಯಾಲಿಗೆ ಸಲಹೆ ಕೊಟ್ಟಿದ್ದಾರೆ. ಹೀಗಾಗಿ ಮಹದಾಯಿ ಅನುಷ್ಠಾನಕ್ಕಾಗಿ ಟ್ರ್ಯಾಕ್ಟರ್ ರ್ಯಾಲಿ ಮಾಡುತ್ತೇವೆ. ಮೇ ಮೊದಲ ವಾರ ಅಥವಾ 2ನೇ ವಾರದಲ್ಲಿ ಟ್ರ್ಯಾಕ್ಟರ್ ರ್ಯಾಲಿ ಮಾಡುತ್ತೇವೆ. ಸರಿಯಾದ ದಿನಾಂಕ ನಿಗದಿ ಮಾಡುತ್ತೇವೆ. ಆದ್ದರಿಂದ ಎಂಟು ದಿನ ಟ್ರ್ಯಾಕ್ಟರ್ ರ್ಯಾಲಿ ಇರುತ್ತದೆ ಎಂದು ಅವರು ಹೇಳಿದರು.
ಮಾಜಿ ಸಚಿವ ಎಚ್. ಕೆ. ಪಾಟೀಲ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಶ್ರೀನಿವಾಸ್ ಮಾನೆ, ಪ್ರಸಾದ್ ಅಬ್ಬಯ್ಯ, ಕುಸುಮಾವತಿ ಶಿವಳ್ಳಿ, ಎಂಎಲ್ಸಿ ಆರ್. ಬಿ. ತಿಮ್ಮಾಪುರ್ ಮುಂತಾದ ಪ್ರಮುಖರು ಭಾಗವಹಿಸಿದ್ದರು./////