Belagavi News In Kannada | News Belgaum

ವಿಧಾನಸಭೆಯಲ್ಲಿಯೇ ಮಾರಾಮಾರಿ; ಐವರು ಬಿಜೆಪಿ ಶಾಸಕರು ಅಮಾನತು

ಕೋಲ್ಕತ್ತಾ: ಬೀರ್‌ಭುಮ್‍ನ ಹಿಂಸಾಚಾರಕ್ಕೆ ಸಂಬಂಧಿಸಿ ಇಂದು ಪಶ್ಚಿಮಬಂಗಾಳದ ವಿಧಾನಸಭೆಯಲ್ಲಿ ಬಿಜೆಪಿ ಹಾಗೂ ತೃಣಮೂಲ ಕಾಂಗ್ರೆಸ್ ಶಾಸಕರ ನಡುವೆ ನಡೆದ ಮಾರಾಮಾರಿಯಲ್ಲಿ ಐವರು ಬಿಜೆಪಿ ಶಾಸಕರನ್ನು ಅಮಾನತು ಮಾಡಲಾಗಿದೆ.

ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಸೋಮವಾರ ಟಿಎಂಸಿ ಮತ್ತು ಬಿಜೆಪಿ ಶಾಸಕರ ನಡುವೆ ಬೀರ್‌ಭುಮ್‍ ಹಿಂಸಾಚಾರದ ಬಗ್ಗೆ ಚರ್ಚೆ ನಡೆದಿದೆ. ಈ ವೇಳೆ ಬಿಜೆಪಿ ಶಾಸಕರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜೀನಾಮೆ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ಈ ಚರ್ಚೆ ತಾರಕಕ್ಕೆ ಏರಿದ್ದು, ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ನಡುವೆ ಮಾರಾಮಾರಿ ನಡೆದಿದೆ.

ಘಟನೆ ಬಳಿಕ ರಾಜ್ಯ ವಿಧಾನಸಭೆಯಲ್ಲಿ ಅಶಿಸ್ತಿನ ನಡೆತೆಗೆ ಬಿಜೆಪಿಯ ಐವರು ಶಾಸಕರನ್ನು ಮುಂದಿನ ಆದೇಶದವರೆಗೆ ಅಮಾನತುಗೊಳಿಸಿದ್ದಾರೆ. ಸುವೆಂದು ಅಧಿಕಾರಿ, ಮನೋಜ್ ತಿಗ್ಗಾ, ನರಹರಿ ಮಹತೋ, ಶಂಕರ್ ಘೋಷ್, ದೀಪಕ್ ಬರ್ಮನ್ ಅಮಾನತಾದ ಶಾಸಕರಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಶಾಸಕರ ಹೊಡೆದಾಟ ವೈರಲ್ ಆಗಿದೆ./////