Belagavi News In Kannada | News Belgaum

ಎಸ್ಸೆಸ್ಸೆಲ್ಸಿ ಪರೀಕ್ಷೆ: 12 ಮಂದಿ ನಕಲಿ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ

ಹುಮನಾಬಾದ: ಎಸ್ಸೆಸ್ಸೆಲ್ಸಿ  ಪರೀಕ್ಷೆಯಲ್ಲಿ 12 ಜನ ನಕಲಿ ವಿದ್ಯಾರ್ಥಿಗಳು  ಪರೀಕ್ಷೆ ಬರೆಯಲು ಮುಂದಾಗಿದ್ದು, ನಕಲಿ ವಿದ್ಯಾರ್ಥಿಗಳನ್ನು ಪೊಲೀಸ್ ವಶಕ್ಕೆ ಒಪ್ಪಿಸಿದ ಘಟನೆ ಪಟ್ಟಣದಲ್ಲಿ ಸೋಮವಾರ ನಡೆದಿದೆ.
ಪಟ್ಟಣದ ಶಾಹೀನ್ ಹಾಗೂ ಅಲಾಮೀನ್ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೂ ಮುಂಚೆ ಕೇಂದ್ರದ ಸಿಬಂದಿಗಳು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ನಕಲಿ ಅಭ್ಯರ್ಥಿಗಳು ಪತ್ತೆಯಾಗಿದ್ದಾರೆ. ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಕೂಡಲೇ ಪೊಲೀಸರಿಗೆ ಹಾಗೂ ತಾಲೂಕು ಆಡಳಿತಕ್ಕೆ ಮಾಹಿತಿ ನೀಡಿದ್ದಾರೆ. ನಕಲಿ ವಿದ್ಯಾರ್ಥಿಗಳನ್ನು ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ತಹಶೀಲ್ದಾರ್ ಡಾ। ಪ್ರದೀಪಕುಮಾರ ಹಿರೇಮಠ ಮಾಹಿತಿ ನೀಡಿದ್ದಾರೆ.///////