Belagavi News In Kannada | News Belgaum

ಉದ್ಯಮಿ ಆರ್.ಎನ್. ನಾಯಕ ಕೊಲೆ ಪ್ರಕರಣ

ಬೆಳಗಾವಿ: ಅಂಕೋಲಾದ ಉದ್ಯಮಿ ಆರ್.ಎನ್. ನಾಯಕ ಕೊಲೆ ಪ್ರಕರಣ ಸಂಬಂಧ ಇಲ್ಲಿನ ಕೋಕಾ ನ್ಯಾಯಾಲಯವು, ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಮಂದಿಯನ್ನು ದೋಷಿಗಳು ಎಂದು ಮಹತ್ವದ ತೀರ್ಪು ಪ್ರಕಟಿಸಿದೆ.

ಏ. 4ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಸಿ.ಎಂ. ಜೋಶಿ ತಿಳಿಸಿದ್ದಾರೆ. ಪ್ರಕರಣದ 6, 11 ಹಾಗೂ 16ನೇ ಆರೋಪಿಗಳನ್ನು ನಿರ್ದೋಷಿಗಳು ಎಂದು ನ್ಯಾಯಾಲಯ ಹೇಳಿದೆ. ಹೀಗಾಗಿ 6ನೇ ಆರೋಪಿ ಕೇರಳದ ರಬ್ದಿನ್ ಫಿಚೈ, 11 ನೇ ಆರೋಪಿ ಬೆಂಗಳೂರಿನ ಮಹ್ಮದ್ ಶಾಬಂದರಿ ಹಾಗೂ 16 ನೇ ಆರೋಪಿ ಉತ್ತರ ಕನ್ನಡದ ಆನಂದ ರಮೇಶ್ ‌ನಾಯಕ ಈ ಪ್ರಕರಣದಲ್ಲಿ ದೋಷಮುಕ್ತರಾಗಿದ್ದಾರೆ.////