Belagavi News In Kannada | News Belgaum

ವೆಸ್ಟ್ ಇಂಡೀಸ್ ಮಣಿಸಿ ಫೈನಲ್​ಗೆ ಲಗ್ಗೆ ಇಟ್ಟ ಆಸ್ಟ್ರೇಲಿಯಾ

ದೆಹಲಿ: ಸೆಮಿಫೈನಲ್‌ನಲ್ಲಿ ವಿಂಡೀಸ್​ ವನಿತೆಯರನ್ನು ಕಾಂಗರೂ ಪಡೆ 157 ರನ್‌ ಅಂತರದಿಂದ ಭರ್ಜರಿ ಜಯ ಗಳಿಸಿದೆ.

ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ವೆಸ್ಟ್ ಇಂಡೀಸ್ ಮಣಿಸಿದ ಆಸ್ಟ್ರೇಲಿಯಾವು ಫೈನಲ್​ಗೆ ಲಗ್ಗೆ ಇಟ್ಟಿದೆ.  ಮಳೆಯಿಂದ 5 ಓವರ್​ಗಳ ಕಡಿತದೊಂದಿಗೆ ಇಂದುಪಂದ್ಯವು ನಡೆಯಿತು. ಟಾಸ್​​ ಗೆದ್ದ ವೆಸ್ಟ್​ ಇಂಡೀಸ್​ ತಂಡವು ಆಸ್ಟ್ರೇಲಿಯಾವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು. 45 ಓವರ್​ಗಳಲ್ಲಿ 3 ವಿಕೆಟ್​ ಕಳೆದುಕೊಂಡು 305 ರನ್​ಗಳ ಬೃಹತ್​ ಮೊತ್ತ ಕಲೆ ಹಾಕಿದರು.

306 ರನ್​ ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್​ ಆರಂಭದಿಂದಲೇ ವಿಕೆಟ್ ಕಳೆದುಕೊಳ್ಳುತ್ತ ಸಾಗಿತು. ವಿಂಡೀಸ್​ ಪತನದ ಹಾದಿ ಹಿಡಿದು 148 ರನ್​ಗೆ ಆಲೌಟ್​ ಆಯಿತು. ಈ ಮೂಲಕ 157 ರನ್‌ ಅಂತರದ ಗೆಲುವಿನೊಂದಿಗೆ ಆಸ್ಟ್ರೇಲಿಯಾವು ಮಹಿಳಾ ವಿಶ್ವಕಪ್ ಟೂರ್ನಿಯ ಫೈನಲ್​ ಪ್ರವೇಶಿಸಿದೆ.
ಟೂರ್ನಿಯ ಎರಡನೇ ಸೆಮಿಫೈನಲ್‌ನಲ್ಲಿ ನಾಳೆ ದಕ್ಷಿಣ ಆಫ್ರಿಕಾ ಹಾಗೂ ಇಂಗ್ಲೆಂಡ್​ ತಂಡಗಳು ಮುಖಾಮುಖಿಯಾಗಲಿವೆ. ಇಲ್ಲಿ ಗೆದ್ದ ತಂಡವು ಭಾನುವಾರ ಏ. 3ರಂದು ನಡೆಯಲಿರುವ ಫೈನಲ್​ನಲ್ಲಿ ಆಸೀಸ್​ ವಿರುದ್ಧ ಪ್ರಶಸ್ತಿಗಾಗಿ ಹೋರಾಡಲಿದೆ.//////