Belagavi News In Kannada | News Belgaum

ರಾಜ್ಯ ಸರ್ಕಾರಕ್ಕೆ ರಕ್ತದಲ್ಲಿ ಪತ್ರ ಬರೆದ ಶ್ರೀಗಂಧ ಬೆಳೆಗಾರ

ಚಿಕ್ಕಮಗಳೂರು: ಹೆದ್ದಾರಿ ಅಗಲಿಕರಣದ ವೇಳೆ ಜಮೀನು ಕಳೆದುಕೊಂಡ ರೈತರಿಗೆ  62 ಕೋಟಿ ಪರಿಹಾರ ಕೊಡಬೇಕಾದ ಜಾಗದಲ್ಲಿ ಎರಡೂವರೆ ಲಕ್ಷ ನೀಡಲು ಸರ್ಕಾರ ಮುಂದಾಗಿರುವ ಕ್ರಮ ವಿರೋಧಿಸಿ ಶ್ರೀಗಂಧದ ಬೆಳೆಗಾರ ಸರ್ಕಾರಕ್ಕೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹಳಿಯೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಳೆದೊಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ಬೆಳಗಾರ ಇಂದು ಸೀರೆಂಜ್‍ನಲ್ಲಿ ರಕ್ತ ತೆಗೆದು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಹೆದ್ದಾರಿ ಅಗಲೀಕರಣದ ವೇಳೆ ಶ್ರೀಗಂಧ ಬೆಳೆಗಾಗರರು ಜಮೀನು ಕಳೆದುಕೊಳ್ಳಲಿದ್ದಾರೆ. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸೂಕ್ತ ಪರಿಹಾರ ನೀಡ ಬೇಕು. 22 ರೈತರಿಗೆ 62 ಕೋಟಿ ಪರಿಹಾರ ಬರಬೇಕು. ಎರಡೂವರೆ ಲಕ್ಷ ಪರಿಹಾರ ನೀಡಲು ಸರ್ಕಾರ ಮುಂದಾಗಿರುವುದು ಸರಿಯಲ್ಲ. ಹೈಕೋರ್ಟ್ ನಿರ್ದೇಶನದಂತೆ ಪರಿಹಾರ ನೀಡಲು ಪತ್ರದಲ್ಲಿ ಒತ್ತಾಯ ಮಾಡಲಾಗಿದೆ./////