Belagavi News In Kannada | News Belgaum

ಜ್ಞಾನ ಹೆಚ್ಚಿಸಿಕೊಳ್ಳಲು ಓದುವ ಹವ್ಯಾಸ ಅಗತ್ಯ

ರಾಮುದುರ್ಗ: ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಂಡು ತಮ್ಮ ಜ್ಞಾನ ಬಂಡಾರ ಹೆಚ್ಚಿಸಿಕೊಳ್ಳಬೇಕು. ಅಲ್ಲದೇ ಪಾಲಕರು ಬೇಸಿಗೆ ಶಾಲಾ ರಜಾ ಅವಧಿಯಲ್ಲಿ ಮಕ್ಕಳ ಬಗ್ಗೆ ಕಾಳಜಿ ವಹಿಸಬೇಕು ಎಂದು ಶಾಲೆಯ ಮುಖ್ಯ ಶಿಕ್ಷಕ ಎಂ.ಎ. ಬನ್ನೂರ ಹೇಳಿದರು.

ತಾಲೂಕಿನ ತೊಂಡಿಕಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ಪ್ರಸಕ್ತ ಸಾಲಿನ 8ನೇ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದಲ್ಲಿಅವರು ಮಾತನಾಡಿ, ವಿದ್ಯಾರ್ಥಿಗಳು ಸಮಯವನ್ನು ಹಾಳು ಮಾಡದೇ ವಿದ್ಯಾಭ್ಯಾಸದತ್ತ ಹೆಚ್ಚು ಗಮನ ಹರಿಸಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ರಾಮಕೃ಼ಷ್ಣ ದೇಸಾಯಿ, ಸದಸ್ಯ ರಾಕೇಶ ಚಿಕ್ಕೂರ ಮಾತನಾಡಿ, ಶಾಲೆಗೆ ಬೇಕಾಗುವ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಪ್ರಯತ್ನಿಸಲಾಗುವುದು ಎಂದರು.
ಶಾಲೆಯ ಆದರ್ಶ ವಿದ್ಯಾರ್ಥಿಯಾಗಿ ಆಯ್ಕೆಯಾದ ಶಂಕರ ಬುರ್ಲಿ ಮತ್ತು ಆದರ್ಶ ವಿದ್ಯಾರ್ಥಿನಿಯಾಗಿ ಆಯ್ಕೆಯಾದ  ಜನತಬಿ ನದಾಪ್ ಅವರನ್ನು ಸತ್ಕರಿಸಿ ಗೌರವಿಸಲಾಯಿತು. ನಂತರ  ಶಾಲಾ ಮಕ್ಕಳಿಂದ ಸಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಸಮಾರಂಭದಲ್ಲಿ ಗ್ರಾಪಂ ಸದಸ್ಯರಾದ ಸುಸಲವ್ವ ಪೂಜೇರ, ಲಕ್ಷ್ಮೀ ಲೆಂಕೆನ್ನವರ, ಗ್ರಾಪಂ ಕಾರ್ಯದರ್ಶಿ ಮಂಜುಳಾ ಪಾಟೀಲ, ಶಿಕ್ಷಕರಾದ ಪಿ.ಟಿ. ತೋಳಮಟ್ಟಿ, ವೈ.ಪಿ. ಉದಪುಡ್ಡಿ, ಕೆ.ಎಂ. ಹಿರೇಮಠ, ಬಿ.ಬಿ. ವಡೇಯರ, ಬಿ.ಐ. ಯಡಹಳ್ಳಿ, ಆರ್.ಎಂ. ಲಂಕೆನ್ನವರ, ಡಿ.ಡಿ. ಹಲಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.//////