Belagavi News In Kannada | News Belgaum

ಮೋದಿ ಪರೀಕ್ಷಾ ಪೇ ಚರ್ಚಾ ಸಂವಾದಕ್ಕೆ ಬೆಳಗಾವಿಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆ

ಬೆಳಗಾವಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ “ಪರೀಕ್ಷಾ ಪೇ ಚರ್ಚಾ” 5ನೇ ಆವೃತ್ತಿ ಸಂವಾದ ಕಾರ್ಯಕ್ರಮಕ್ಕೆ ಬೆಳಗಾವಿಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆ ಆಗಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶುಕ್ರವಾರ ನಡೆಯಲಿರುವ ಪರೀಕ್ಷಾ ಪೇ ಚರ್ಚಾ 5ನೇ ಸಂವಾದ ಕಾರ್ಯಕ್ರಮದಲ್ಲಿ ಭಾರತ ಮತ್ತು ಹೊರದೇಶಗಳಿಂದ ಕೋಟ್ಯಂತರ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರು ವರ್ಚುಯಲ್ ಮೂಲಕ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸೃಜನಾತ್ಮಕ ಬರವಣಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಸುಮಾರು 15.7ಲಕ್ಷ ಜನ ಉತ್ಸಾಹದಿಂದ ನೊಂದಾಯಿಸಿಕೊಂಡಿದ್ದಾರೆ. ಏಪ್ರಿಲ್ 1 ರಂದು ಪ್ರಧಾನ ಮಂತ್ರಿಯವರು ಜಗತ್ತಿನಾದ್ಯಂತ ವಿದ್ಯಾರ್ಥಿಗಳು, ಶಿಕ್ಷಕರು, ಮತ್ತು ಪೋಷಕರ ಜೊತೆ ಸಂವಾದ ನಡೆಸಲಿದ್ದಾರೆ. ಪರೀಕ್ಷಾ ಪೇ ಚರ್ಚಾ ಬಹುನಿರೀಕ್ಷಿತ ವಾರ್ಷಿಕ ಕಾರ್ಯಕ್ರಮವಾಗಿದೆ. ಇದರಲ್ಲಿ ಮೋದಿಯವರು ಪರೀಕ್ಷಾ ಒತ್ತಡಕ್ಕೆ ಸಂಬಂಧಿಸಿದ ಮತ್ತು ಪರೀಕ್ಷೆ ಕುರಿತು ವಿದ್ಯಾರ್ಥಿಗಳು ಎದುರಿಸುವ ಪ್ರಶ್ನೆಗಳಗೆ ವಿಶಿಷ್ಟ ರೀತಿಯಲ್ಲಿ ನೇರ ಪ್ರಸಾರ ಮೂಲಕ ಉತ್ತರಿಸಲಿದ್ದಾರೆ ಎಂದರು.
ವಿಶೇಷವಾಗಿ ಬೆಳಗಾವಿ ಜಿಲ್ಲೆಯಿಂದ ಶ್ರೇಯಸ್ ಮಾರ್ಗನಕೊಪ್ಪ, ಜಾನವಿ ದ್ವಿಬೇದಿ ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಪರೀಕ್ಷಾ ಪೇ ಚರ್ಚಾ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು./////