ಕಾರ್ ಸ್ಫೋಟ: ಸಾವಿನ ಸಂಖ್ಯೆ 12ಕ್ಕೆ ಏರಿಕೆ

ಅಫ್ಘಾನಿಸ್ತಾನ: ಅಫ್ಘಾನಿಸ್ತಾನದ ಪಶ್ಚಿಮ ಪ್ರಾಂತ್ಯದ ಹೆರಾತ್ನಲ್ಲಿ ನಡೆದ ಕಾರ್ ಬಾಂಬ್ ಸ್ಫೋಟದಲ್ಲಿ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದು, ಜೊತೆಗೆ 25 ಮಂದಿ ಗಂಭೀರ ಗಾಯಗೊಂಡಿದ್ದಾರೆ.
“ಹೆರಾತ್ ನಗರದ PD 12 ನಲ್ಲಿ ಬಾಂಬ್ ಸ್ಫೋಟಗೊಂಡಿದ್ದ ಪರಿಣಾಮ ಶುಕ್ರವಾರ ಏಳು ಮಂದಿ ಸಾವನ್ನಪ್ಪಿದ್ದರು. ಶನಿವಾರ ಸಾವಿನ ಸಂಖ್ಯೆ 12 ಕ್ಕೆ ಏರಿದೆಯಾಗಿದ್ದು, 25 ಮಂದಿ ಗಾಯಗೊಂಡಿದ್ದಾರೆ ಎಂದು ಪ್ರಾಂತೀಯ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಕ್ರೀಡಾ ಮೈದಾನದಲ್ಲಿ ಸ್ಫೋಟಕಗಳನ್ನು ಹೂತು ಇಡಲಾಗಿದ್ದು ಯುವಕರು ಆಟವಾಡುವ ವೇಳೆ ಸ್ಪೋಟಗೊಂಡಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ./////