Belagavi News In Kannada | News Belgaum

ರಾಜಸ್ಥಾನ್ ವಿರುದ್ಧ ಟಾಸ್ ಗೆದ್ದ ಮುಂಬೈ ಫೀಲ್ಡಿಂಗ್ ಆಯ್ಕೆ

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಶನಿವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

ಮೊದಲ ಪಂದ್ಯದಲ್ಲಿ ಜಯದ ಬೆಲ್ಲದ ಸಿಹಿಯುಂಡು ಆತ್ಮವಿಶ್ವಾಸದ ಉತ್ತುಂಗದಲ್ಲಿರುವ ರಾಜಸ್ಥಾನ ರಾಯಲ್ಸ್ ಮತ್ತು ಆರಂಭದಲ್ಲಿಯೇ ಸೋಲಿನ ಕಹಿಯುಂಡಿರುವ ಮುಂಬೈ ಇಂಡಿಯನ್ಸ್ ಸವಾಲನ್ನು ಎದುರಿಸುತ್ತಿದೆ.

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್‌ಕೀಪರ್), ತಿಲಕ್ ವರ್ಮಾ, ಅನ್ಮೋಲ್‌ಪ್ರೀತ್ ಸಿಂಗ್, ಕೀರನ್ ಪೊಲಾರ್ಡ್, ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್, ಡ್ಯಾನಿಲ್ ಸ್ಯಾಮ್ಸ್, ಮುರುಗನ್ ಅಶ್ವಿನ್, ಜಸ್‌ಪ್ರೀತ್ ಬೂಮ್ರಾ, ಟೈಮಲ್ ಮಿಲ್ಸ್, ಬಾಸಿಲ್ ಥಂಪಿ, ಜಯದೇವ್ ಉನದ್ಕತ್, ಅರ್ಜುನ್ ತೆಂಡೂಲ್ಕರ್, ಆರ್ಯನ್ ಜುಯಾಲ್, ಸಂಜಯ್ ಯಾದವ್.

 

ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ-ವಿಕೆಟ್‌ಕೀಪರ್), ದೇವದತ್ತ ಪಡಿಕ್ಕಲ್, ಯಶಸ್ವಿ ಜೈಸ್ವಾಲ್, ಜಾಸ್ ಬಟ್ಲರ್, ಶಿಮ್ರೊನ್ ಹೆಟ್ಮೆಯರ್, ರಿಯಾನ್ ಪರಾಗ್, ಆರ್. ಅಶ್ವಿನ್, ನೇಥನ್ ಕೌಲ್ಟರ್‌ನೈಲ್, ಯಜುವೇಂದ್ರ ಚಾಹಲ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ ಕೃಷ್ಣ, ನವದೀಪ್ ಸೈನಿ, ಕೆ.ಸಿ. ಕಾರ್ಯಪ್ಪ, ಕರುಣ್ ನಾಯರ್.//////