ಪರೀಕ್ಷೆ ಬರೆಯಲು ಹೋದ ವಿದ್ಯಾರ್ಥಿ ಅಪಘಾತದಲ್ಲಿ ಸಾವು

ತುಮಕೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಯೊಬ್ಬ ತನ್ನ ಸ್ನೇಹಿತರೊಂದಿಗೆ ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ವೇಳೆ ಬೈಕ್ ಅಪಘಾತಕ್ಕಿಡಾಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ.
ನವೀನ್ ಮೃತ ವಿದ್ಯಾರ್ಥಿ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಅಮೃತೂರು ಬಳಿ ಘಟನೆ ನಡೆದಿದೆ. ಇಂದು ನಡೆಯುತ್ತಿದ್ದ ಗಣಿತ ಪರೀಕ್ಷೆ ಬರೆಯಲು ಮೂವರು ತೆರಳುತ್ತಿದ್ದರು. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿಯಾಗಿದೆ.
ಘಟನೆಯಲ್ಲಿ ನವೀನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕಿನಲ್ಲಿ ತೆರಳುತ್ತಿದ್ದ ಮತ್ತಿಬ್ಬರು ವಿದ್ಯಾರ್ಥಿಗಳಾದ ಶರತ್, ದರ್ಶನ್ಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ಅಮೃತೂರು ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ಎನ್ನಲಾಗಿದೆ. ಡಾ. ರಾಜೇಂದ್ರಪ್ರಸಾದ್ ಹೈಸ್ಕೂಲ್ನಲ್ಲಿ ವ್ಯಾಸಾಂಗ ಮಾಡುತ್ತಿದ್ದರು. ಅಮೃತ್ತೂರು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ./////