Belagavi News In Kannada | News Belgaum

ಕಾಶ್ಮೀರಿ ಮುಸ್ಲಿಂ ಹುಡುಗಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ

ಬೆಂಗಳೂರು: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ 26 ಹರೆಯಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲ್ಲಿ ಸೋಶಿಯಲ್ ಮೀಡಿಯಾ ಸೇರಿದಂತೆ ಸಿನಿರಂಗದಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ರಶ್ಮಿಕಾ ಈ ಹುಟ್ಟು ಹಬ್ಬಕ್ಕೆ ವಿಶೇಷ ಎನ್ನುವಂತೆ ಇನ್ನೂ ಹೆಸರಿಡದ ಅವರ ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದೆ.

ಈ ವೀಡಿಯೋದಲ್ಲಿ ರಶ್ಮಿಕಾ ಅಪರೂಪದ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. ಟಾಲಿವುಡ್ ಹೊಸ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಿದ್ದು, ಈ ಸಿನಿಮಾಗೆ ಇನ್ನೂ ಹೆಸರಿಟ್ಟಿಲ್ಲ. ಈ ಚಿತ್ರದಲ್ಲಿ ದಕ್ಷಿಣದ ನಟ, ನಿರ್ಮಾಪಕ ದುಲ್ಕರ್ ಸಲ್ಮಾನ್ ನಾಯಕನಾಗಿ ನಟಿಸುತ್ತಿದ್ದು, ಹನು ರಾಘವಪುಡಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ದುಲ್ಕರ್ ಅವರು ಲೆಫ್ಟಿನೆಂಟ್ ರಾಮ್ ಆಗಿ ಕಾಣಿಸಿಕೊಳ್ಳಲಿದ್ದು, ಮೃಣಾಲ್ ಠಾಕೂರ್ ಸೀತೆಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಹೊಸ ತಾರಾಬಳಗವನ್ನು ಪರಿಚಯಿಸಲಾಗಿದ್ದು, ರಶ್ಮಿಕಾ ಮಂದಣ್ಣ ಚಿತ್ರತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಈ ಸಿನಿಮಾ ದ್ವಿಭಾಷೆಗಳಲ್ಲಿ ಮೂಡಿಬರಲಿದೆ.
ಈ ಚಿತ್ರದಲ್ಲಿ ರಶ್ಮಿಕಾ ಪಾತ್ರ ಡಿಫರೆಂಟ್ ಆಗಿದೆ ಎಂಬುದು ಪೋಸ್ಟರ್ ಅರ್ಥ ಮಾಡಿಸುತ್ತದೆ. ತಮ್ಮ ನೆಚ್ಚಿನ ತಾರೆಯ ಈ ಫೋಟೋ ನೋಡಿದ ರಶ್ಮಿಕಾ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಅಲ್ಲದೇ, ಸಿನಿಮಾ ಅಪ್ಡೇಟ್‌ಗಾಗಿ ಕಾತುರದಿಂದ ಕಾಯುತ್ತಿದ್ದಾರೆ.
ರಶ್ಮಿಕಾ ಮಂದಣ್ಣ ಅವರ ಹುಟ್ಟುಹಬ್ಬದ ಸಂದರ್ಭ ಚಿತ್ರತಂಡ ರಶ್ಮಿಕಾ ಪಾತ್ರವನ್ನು ಅಭಿಮಾನಿಗಳಿಗೆ ಪರಿಚಯ ಮಾಡುವ ಮೂಲಕ ವಿಶೇಷ ವಿಶ್ ಮಾಡಿದೆ. ಈ ಕುರಿತು ಮಾತನಾಡಿದ ನಿರ್ಮಾಪಕ, ‘ಸಿನಿಮಾದಲ್ಲಿ ರಶ್ಮಿಕಾ ಮಾಡುತ್ತಿರುವ ಪಾತ್ರ ಸಾಮಾನ್ಯವಾಗಿಲ್ಲ. ಅವರು ‘ಅಫ್ರೀನ್’ ಎಂಬ ಕಾಶ್ಮೀರಿ ಮುಸ್ಲಿಂ ಹುಡುಗಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಭಿನ್ನ ಪಾತ್ರದಲ್ಲಿ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.
ಈ ಫೋಟೋದಲ್ಲಿ ರಶ್ಮಿಕಾ, ಕೆಂಪು ಹಿಜಾಬ್ ಧರಿಸಿದ್ದು, ಡೇರ್ ಲುಕ್‌ನಲ್ಲಿ ಇದ್ದಾರೆ. ಈ ವೀಡಿಯೋ ಮ್ಯೂಸಿಕ್‌ನಿಂದ ಪ್ರಾರಂಭವಾಗಿದ್ದು, ಇದಕ್ಕೆ ವಿಶಾಲ್ ಚಂದ್ರಶೇಖರ್ ಅವರ ಹಿನ್ನೆಲೆ ಸಂಗೀತವನ್ನು ಕೊಟ್ಟಿದ್ದಾರೆ./////