ಮೊಬೈಲ್ ಮೂಲಕವೇ ಸಿಗಲಿದೆ ಬಿಎಂಟಿಸಿ ಬಸ್ ಪಾಸ್

ಬೆಂಗಳೂರು: ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ಗಳಲ್ಲಿ ಸಂಚಾರ ನಡೆಸುವ ಲಕ್ಷಾಂತರ ಜನರಿಗೆ ಸಿಹಿ ಸುದ್ದಿ. ಕೆಲವೇ ದಿನಗಳಲ್ಲಿ ಬಿಎಂಟಿಸಿ ಮಾಸಿಕ, ದಿನದ ಪಾಸುಗಳು ಮೊಬೈಲ್ ಅಪ್ಲಿಕೇಶನ್ ಮೂಲಕ ಲಭ್ಯವಾಗಲಿವೆ.
ಬಿಎಂಟಿಸಿಯ ಹವಾನಿಯಂತ್ರಿತ ಸೇರಿದಂತೆ ಎಲ್ಲಾ ಮಾದರಿ ಬಸ್ಗಳ ಪಾಸುಗಳು ಇನ್ನು ಮುಂದೆ ಮೊಬೈಲ್ ಅಪ್ಲಿಕೇಶನ್ ಮೂಲಕ ಸಿಗಲಿದೆ ಎಂದು ಬಿಎಂಟಿಸಿ ಹೇಳಿದೆ. ಪಾಸುಗಳನ್ನು ಪಡೆಯಲು ಬಯಸುವ ಪ್ರಯಾಣಿಕರು Tummoc ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಬೇಕು.
ಈಗ ಪಾಸುಗಳನ್ನು ಪಡೆಯಲು ಪ್ರಯಾಣಿಕರು ಟಿಟಿಎಂಸಿ, ಬಸ್ ನಿಲ್ದಾಣಗಳಿಗೆ ಭೇಟಿ ನೀಡುತ್ತಾರೆ. ಇನ್ನು ಮುಂದೆ ಮೊಬೈಲ್ ಅಪ್ಲಿಕೇಶನ್ಗಳ ಮೂಲಕವೇ ಎಲ್ಲಾ ಮಾದರಿ ಬಸ್ಗಳ ಪಾಸುಗಳು ಲಭ್ಯವಾಗಲಿವೆ. ಎರಡು ಮೂರು ತಿಂಗಳಿನಲ್ಲಿ ಈ ಸೇವೆ ಲಭ್ಯವಾಗಲಿದೆ ಎಂದು ಬಿಎಂಟಿಸಿ ತಿಳಿಸಿದೆ.//////