ರಾಣಿ ಚನ್ನಮ್ಮಳ ನಾಡಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಸಚಿವ ಮುರುಗೇಶ ನಿರಾಣಿ

ಬೆಳಗಾವಿ: ” ಕಿತ್ತೂರ ಚನ್ನಮ್ಮಳ ನಾಡಿನಲ್ಲಿ ಬೃಹತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಾಗಲೇ ರೂಪರೇಷಗಳನ್ನು ಹಾಕಿಕೊಳ್ಳಲಾಗಿದ್ದು, ಈ ಯೋಜನೆಯಿಂದ ಈ ಭಾಗದ ಅಭಿವೃದ್ಧಿಗೆ ಅನುಕೂಲವಾಗಲಿದೆ” ಎಂದು ಬೃಹತ್ ಮತ್ತು ಮದ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹೇಳಿದರು.
ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಬೆಳಗಾವಿ ಮತ್ತು ಹುಬ್ಬಳ್ಳಿ ಡೋಮ್ಯಾಸ್ಟಿಕ್ ಏರ್ಪೋರ್ಟ್ ಮಾಡಿಕೊಂಡು ಕಿತ್ತೂರಿನಲ್ಲಿಯೂ ಒಂದು ಏರ್ ಪೋರ್ಟ್ ನ್ನು ಮುಂಬರುವ ದಿನಗಳಲ್ಲಿ ಕಾರ್ಯ ನಡೆಯಲಿದೆ.
ಈಗಾಗಲೇ ಖಾಸಗಿ ಬಂಡವಾಳ ಹೂಡಿಕೆದಾರರೊಂದಿಗೆ ಚರ್ಚಿಸಲಾಗಿದೆ. ಶೀಘ್ರದಲ್ಲಿ ವಿಮಾನ ನಿಲ್ದಾಣವಾಗಲಿದೆ ಎಂದು ಬೃಹತ್ ಮತ್ತು ಮದ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹೇಳಿದರು. ಉತ್ತರ ಕರ್ನಾಟಕದಲ್ಲಿ ಅಭಿವೃದ್ಧಿ ಹೊಂದಲು ಮೂಲಭೂತ ಸೌಕರ್ಯ ಬೇಕು. ಕಾರವಾರ ಪೋರ್ಟ್ನನ್ನು ಪಿಪಿ ಮಾದರಿಯಲ್ಲಿ ಅಭಿವೃದ್ಧಿ ಪಡಿಸುವ ಕೆಲಸ ಮಾಡಲಾಗುತ್ತದೆ. ಅದರಂತೆ, ಕಿತ್ತೂರಿನಲ್ಲಿಯೂ ಒಂದು ವಿಮಾನ ನಿಲ್ದಾಣ ಮಾಡುವ ಖಾಸಗಿ ಕಂಪನಿಯವರು ಅವರು ಸಹ ಸಹಮತ ನೀಡಿದ್ದಾರೆ ಶೀಘ್ರದಲ್ಲಿಯೇ ಕಿತ್ತೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿದೆ ಎಂದು ಭರವಸೆ ನೀಡಿದರು. /////