Belagavi News In Kannada | News Belgaum

ಬಾಲಗೌರವ’ ಹಾಗೂ ‘ಮಕ್ಕಳ ಪುಸ್ತಕ ಚಂದಿರ’ ಪ್ರಶಸ್ತಿ: ಅರ್ಜಿ ಆಹ್ವಾನ

 

ಬೆಳಗಾವಿ,ಏ.06: ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಗೆ “ಬಾಲಗೌರವ ಪ್ರಶಸ್ತಿ” ಹಾಗೂ ಮಕ್ಕಳ ಕುರಿತಾಗಿ ರಚಿಸಲ್ಪಟ್ಟಿರುವ ಪುಸ್ತಕಗಳಿಗೆ “ಮಕ್ಕಳ ಪುಸ್ತಕ ಚಂದಿರ” ಪ್ರಶಸ್ತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

‘ಬಾಲ ಗೌರವ’ ಪ್ರಶಸ್ತಿ:
ಕ್ರೀಡಾ ಕ್ಷೇತ್ರ, ನೃತ್ಯ ಕ್ಷೇತ್ರ, ಸಂಗೀತ ಕ್ಷೇತ್ರ, ಸಾಹಿತ್ಯ ಕ್ಷೇತ್ರ, ಕರಕುಶಲ ಕ್ಷೇತ್ರ, ಚಿತ್ರಕಲೆ ಕ್ಷೇತ್ರ, ಬಹುಮುಖ ಪ್ರತಿಭೆ, ನಾಟಕ ಕ್ಷೇತ್ರ ಹೀಗೆ 08 ಕ್ಷೇತ್ರಗಳಲ್ಲಿ ಅಸಾಧಾರಣಾ ಸಾಧನೆಯನ್ನು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಮಾಡಿದ 18 ವರ್ಷದ ಒಳಗಿನ ಮಕ್ಕಳಿಂದ “ಬಾಲಗೌರವ ಪ್ರಶಸ್ತಿ’ ಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರಶಸ್ತಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ವಿಶೇಷ ಸಾಧನೆಗೈದ ಪ್ರಶಸ್ತಿ ಪುರಸ್ಕøತ ಮಗುವಾಗಿರಬೇಕು. ಮಕ್ಕಳು ಅಕಾಡೆಮಿ ಬಾಲಗೌರವ ಪ್ರಶಸ್ತಿಗಾಗಿ ತಮ್ಮ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ಅರ್ಜಿಯನ್ನು ಸಲ್ಲಿಸುವುದಕ್ಕೆ ಏಪ್ರಿಲ್ 18 ರವರೆಗೆ ಅವಧಿ ವಿಸ್ತರಿಸಲಾಗಿದೆ.
ಅರ್ಜಿಗಳನ್ನು ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇಔಟ್ ಹಿಂಭಾಗ, ಕೆ.ಎಚ್.ಬಿ. ಕಾಲೋನಿ, ಲಕಮನಹಳ್ಳಿ ಧಾರವಾಡ-580004 ಇಲ್ಲಿಗೆ ಕಳುಹಿಸುವುದು. ತದನಂತರ ಬರುವ ಅರ್ಜಿಗಳನ್ನು ಪ್ರಶಸ್ತಿಯ ಆಯ್ಕೆಗಾಗಿ ಪರಿಗಣ ಸಲಾಗುವುದಿಲ್ಲ. ಅರ್ಜಿ ಸಲ್ಲಿಸುವಾಗ ‘ಅಕಾಡೆಮಿ ಬಾಲಗೌರವ ಪ್ರಶಸ್ತಿಗಾಗಿ ಅರ್ಜಿ’ ಎಂದು ಲಕೋಟೆ ಮೇಲೆ ನಮೂದಿಸಿರಬೇಕು.
‘ಮಕ್ಕಳ ಪುಸ್ತಕ ಚಂದಿರ’ ಪ್ರಶಸ್ತಿ:
ಕರ್ನಾಟಕ ಬಾಲವಿಕಾಸ ಅಕಾಡೆಮಿಯು 2019, 2020 ಹಾಗೂ 2021 ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ “ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ’ಯನ್ನು ಪ್ರದಾನÀ ಮಾಡಲು ಉದ್ದೇಶಿಸಲಾಗಿದೆ. ಆದ್ದರಿಂದ ಆಯಾ ಸಾಲಿನ ಅವಧಿಯಲ್ಲಿ ಅಂದರೆ ಜನೇವರಿ ಯಿಂದ ಡಿಸೆಂಬರ ತಿಂಗಳ ಅಂತ್ಯದ ಅವಧಿಯಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ, (ಪಠ್ಯಾಧಾರಿತ ಬಿಟ್ಟು) ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ) ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿ ಹೀಗೆ ಏಳು ಪ್ರಕಾರದ ಮಕ್ಕಳ ಸಾಹಿತ್ಯದ ಕೃತಿಗಳನ್ನು ಪ್ರಶಸ್ತಿಗಾಗಿ ಆಹ್ವಾನಿಸಲಾಗಿದೆ. ಈ ಮೇಲ್ಕಾಣ ಸಿದ ಕ್ಷೇತ್ರಗಳಲ್ಲಿ ಪ್ರಕಟಗೊಂಡ ಪುಸ್ತಕಗಳನ್ನು ಪ್ರಶಸ್ತಿಗಾಗಿ ಪರಿಗಣ ಸಲು/ಮೌಲ್ಯಮಾಪನಗೊಳಿಸಲು ಪ್ರತಿಯೊಂದು ಕೃತಿಯ 4 ಪ್ರತಿಗಳನ್ನು ಸಲ್ಲಿಸುವುದಕ್ಕೆ ಏಪ್ರಿಲ್ 18ರವರೆಗೆ ಅವಧಿ ವಿಸ್ತರಿಸಲಾಗಿದೆ.
ಪುಸ್ತಕಗಳನ್ನು ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇಔಟ್ ಹಿಂಭಾಗ, ಕೆ.ಎಚ್.ಬಿ. ಕಾಲೋನಿ, ಲಕಮನಹಳ್ಳಿ ಧಾರವಾಡ-580004 ಇಲ್ಲಿಗೆ ಕಳುಹಿಸಬೇಕು. ನಂತರ ಬರುವ ಪುಸ್ತಕಗಳನ್ನು ಪ್ರಶಸ್ತಿಯ ಆಯ್ಕೆಗಾಗಿ ಪರಿಗಣ ಸಲಾಗುವುದಿಲ್ಲ. ಪುಸ್ತಕಗಳನ್ನು ಸಲ್ಲಿಸುವಾಗ ‘ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಅರ್ಜಿ’ ಎಂದು ಲಕೋಟೆ ಮೇಲೆ ನಮೂದಿಸಿರಬೇಕು. ಹೆಚ್ಚಿನ ಮಾಹಿತಿಗಾಗಿ ಮಾನ್ಯ ಯೋಜನಾಧಿಕಾರಿಗಳು, ಚಂದ್ರಿಕಾಲೇಔಟ್ ಹಿಂಭಾಗ, ಕೆ.ಎಚ್.ಬಿ. ಕಾಲೋನಿ, ಲಕಮನಹಳ್ಳೀ ಧಾರವಾಡ-580004 ಕಚೇರಿ ದೂರವಾಣ ಸಂಖ್ಯೆ:0836-2461666ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.