Belagavi News In Kannada | News Belgaum

ಬುದ್ಧಿಮಾಂದ್ಯ ಮಕ್ಕಳಿಗೆ ಆರೋಗ್ಯ ತಪಾಸಣೆ: ಏ.7 ರಂದು ಉಚಿತ ಬಸ್ ವ್ಯವಸ್ಥೆ

ಬುದ್ಧಿಮಾಂದ್ಯ ಮಕ್ಕಳಿಗೆ ಆರೋಗ್ಯ ತಪಾಸಣೆ: ಏ.7 ರಂದು ಉಚಿತ ಬಸ್ ವ್ಯವಸ್ಥೆ

ಬೆಳಗಾವಿ,ಏ.06: ಸ್ಪೆಷಲ್ ಒಲಂಪಿಕ್ಸ್ ಭಾರತ್ ಆಯೋಜಿಸಿರುವ“ಆಜಾಧಿ ಕಾ ಅಮೃತ್ ಮಹೋತ್ಸವ” ಕಾರ್ಯಕ್ರಮ ಹಿನ್ನೆಲೆಯಲ್ಲಿ ಏಪ್ರಿಲ್ 7 ರಂದು ಜಿಲ್ಲೆಯಲ್ಲಿ ಬುದ್ಧಿಮಾಂದ್ಯ ಮಕ್ಕಳಿಗೆ ಹಮ್ಮಿಕೊಂಡಿರುವ ಆರೋಗ್ಯ ತಪಾಸಣೆಗೆ ತೆರಳುವ ಮಕ್ಕಳಿಗಾಗಿ ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಸಲು ಅವಕಾಶ ಕಲ್ಪಿಸಲಾಗಿದೆ.

ದೇಶಾದ್ಯಂತ 75,000 ಬುದ್ಧಿಮಾಂದ್ಯ ಮಕ್ಕಳಿಗೆ ಆರೋಗ್ಯ ತಪಾಸಣೆಯನ್ನು ಹಮ್ಮಿಕೊಳ್ಳಲಾಗಿದ್ದು ಅದರಂತೆ ಜಿಲ್ಲೆಯ ಸರ್ಕಾರ ಹಾಗೂ ಸರ್ಕಾರೇತರ ವಿಶೇಷ ಶಾಲೆಯ ಸ್ಪೆಷಲ್ ಒಲಂಪಿಕ್ಸ್ ಭಾರತ-ಕರ್ನಾಟಕ ಅಮೃತ ಮಹೋತ್ಸವದ ಗುರುತಿನ ಚೀಟಿ ಹೊಂದಿರುವ ಬುದ್ದಿಮಾಂದ್ಯ ಮಕ್ಕಳು ಒಬ್ಬರು ಸಹಾಯಕರೊಂದಿಗೆ (ಪೆÇೀಷಕರು/ಶಿಕ್ಷಕರು/ಸ್ವಯಂಸೇವಕರು) ಒಂದು ದಿನದ ಆರೋಗ್ಯ ತಪಾಸಣೆಯಲ್ಲಿ ಪಾಲ್ಗೊಳ್ಳಬಹುದಾಗಿದೆ.

ಆರೋಗ್ಯ ತಪಾಸಣೆಗಾಗಿ ನಿಯೋಜಿತ ಸ್ಥಳಕ್ಕೆ ಹೋಗುವಾಗ ಮತ್ತು ಹಿಂದಿರುಗುವಾಗ ಬುದ್ಧಿಮಾಂದ್ಯ ಮಕ್ಕಳು ಗುರುತಿನ ಚೀಟಿಯನ್ನು ತೋರಿಸಿ ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಸಲು ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಸಂಬಂಧಿಸಿದ ಚಾಲನಾ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////

 

 

 

ಶಿಶುಪಾಲನಾ ಕೇಂದ್ರ ನಡೆಸಲು ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ

 

ಬೆಳಗಾವಿ, ಏ.06 : ಬೆಳಗಾವಿಯ ಜಿಲ್ಲಾ ಪಂಚಾಯತ ಕಟ್ಟಡದಲ್ಲಿ ಹೊಸದಾಗಿ ಪ್ರಾರಂಭಿಸಲಾದ ಶಿಶುಪಾಲನಾ ಕೇಂದ್ರವನ್ನು ನಡೆಸಲು ಅನುಭವವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಏಪ್ರಿಲ್ 16ರೊಳಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ ಇವರನ್ನು ಖುದ್ದಾಗಿ ಅಥವಾ ದೂರವಾಣ ಸಂಖ್ಯೆ: 0831-2407235 ಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಬೆಳಗಾವಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ./////

‘ಉದ್ಯಮಿಯಾಗು- ಉದ್ಯೋಗ ನೀಡು’: ಏಪ್ರಿಲ್ 8 ರಂದು

ಬೆಳಗಾವಿ, ಏ.06: ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಡಾ. ಮುರುಗೇಶ ಆರ್. ನಿರಾಣ ಅವರ ನ್ಭೆತೃತ್ವದಲ್ಲಿ ಏಪ್ರಿಲ್ 8 ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ.ಎ.ಪಿ.ಜೆ. ಅಬ್ದುಲ ಕಲಾಂ ಅಡಿಟೋರಿಯಂನಲ್ಲಿ ‘ಉದ್ಯಮಿಯಾಗು-ಉದ್ಯೋಗ ನೀಡು’ ಕಾರ್ಯಾಗಾರ ನಡೆಯಲಿದೆ.

ಕೈಗಾರಿಕೆ ಮತ್ತು ವಾಣ ಜ್ಯ ನಿರ್ದೇಶನಾಲಯ ಮತ್ತು ಜಿಲ್ಲಾ ಕೈಗಾರಿಕಾ ಕೇಂದ್ರ ಸಹಯೋಗದಲ್ಲಿ ನಡೆಯಲಿರುವ ಈ ಕಾರ್ಯಾಗಾರದಲ್ಲಿ ಸ್ವಯಂ ಉದ್ಯೋಗ ಪ್ರಾರಂಭಿಸಲು ಕೇಂದ್ರ ಹಾಗೂ ರಾಜ್ಯ ಸರಕಾರದ ವಿವಿಧ ಯೋಜನೆಗಳು, ಬ್ಯಾಂಕಿನ ಸಾಲ ಸೌಲಭ್ಯಗಳು, ಸರ್ಕಾರದಿಂದ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುವುದು. ್ಲ ಜಿಲ್ಲೆಯ ಮತ್ತು ರಾಜ್ಯದ ಯಶಸ್ವಿ ಉದ್ದಿಮೆದಾರರು ತಮ್ಮ ಅನುಭವವನ್ನು ಹಂಚಿಕೊಳ್ಳಲಿದ್ದಾರೆ.

ಮಧ್ಯಾಹ್ನದ ಕೈಗಾರಿಕಾ ಅದಾಲತ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಕೈಗಾರಿಕೋದ್ಯಮಿಗಳು ತಾವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಂದ ಸೂಕ್ತ ಪರಿಹಾರ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ಅಂತಿಮ ವರ್ಷದ ಪದವೀಧರ ವಿದ್ಯಾರ್ಥಿಗಳು , ಐ.ಟಿ.ಆಯ್. ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಹಾಗೂ ಭಾವೀ ಕೈಗಾರಿಕೋದ್ಯಮಿಗಳು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ./////

 

ಉಚಿತ ಕೌಶಲ್ಯ ಆಧಾರಿತ ತರಬೇತಿಗೆ ಅರ್ಜಿ ಆಹ್ವಾನ

 

ಬೆಳಗಾವಿ, ಏ.06 : ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆಯ ವತಿಯಿಂದ 45 ದಿನಗಳ “ಕಂಪ್ಯೂಟರ್ ಹಾರ್ಡವೇರ್ ಮತ್ತು ನೆಟ್ ವಕಿರ್ಂಗ್” ಕೌಶಲ್ಯ ಆಧಾರಿತ ತರಬೇತಿ ನೀಡಲು 18 ರಿಂದ 45 ವಯಸ್ಸಿನ ನಿರುದ್ಯೋಗಿ ಯುವಕ/ಯುವತಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ತರಬೇತಿಯು ಸ್ವ- ಉದ್ಯೋಗ ಪ್ರಾರಂಭಿಸಿ ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿದೆ. ತರಬೇತಿ ಅವಧಿಯಲ್ಲಿ ಊಟ, ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ.

ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್, ಯೋಗ ತರಬೇತಿ ಹಾಗೂ ಬ್ಯಾಂಕಿಂಗ್, ಸರ್ಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಕುರಿತು ಮಾಹಿತಿ ನೀಡಲಾಗುವುದು.

ತರಬೇತಿ ಎಪ್ರಿಲ್ 15 ರಿಂದ ಪ್ರಾರಂಭವಾಗಲಿದ್ದು, ಏಪ್ರಿಲ್ 10 ರೊಳಗಾಗಿ ಅಭ್ಯರ್ಥಿಗಳು ಹೆಸರು, ವಿಳಾಸಗಳನ್ನು ನೋಂದಾಯಿಸಲು ತಿಳಿಸಲಾಗಿದೆ.

ತರಬೇತಿಯಲ್ಲಿ ಭಾಗವಹಿಸಲು ಆಸಕ್ತ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣ ಸಂಖ್ಯೆ: 9483485489, 9482188780, 8197022501, 08284-295307-220807 ಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.////