Belagavi News In Kannada | News Belgaum

ಮಚ್ಛೆ 110 ವಿದ್ಯುತ್ ಉಪಕೇಂದ್ರ: ಏ.9 & 10 ರಂದು ವಿದ್ಯುತ್ ವ್ಯತ್ಯಯ

ಬೆಳಗಾವಿ,ಏ.07: ಹುವಿಸಕಂನಿ ವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಏಪ್ರಿಲ್9 ಹಾಗೂ 10 ರಂದು ಬೆಳಿಗ್ಗೆ 11 ಗಂಟೆಯಿಂದ ಸಾಯಂಕಾಲ 6 ಗಂಟೆಯವರೆಗೆ 110 ಕೆ.ವ್ಹಿ. ಮಚ್ಛೆ ಉಪಕೇಂದ್ರದಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಆಗಲಿದೆ.

ಏಪ್ರಿಲ್ 9 ರಂದು ಬೆಳಗಾವಿ ತಾಲೂಕಿನ ಬಳಗಾಮಟ್ಟಿ, ಕುಟ್ಟಲವಾಡಿ, ಬಾಮನವಾಡಿ, ನಾವಗೆ, ಜಾನೇವಾಡಿ, ಬಾದರವಾಡಿ, ರಣಕುಂಡೆ, ಕರ್ಲೇ, ಕಿನಯೇ, ತೀರ್ಥಕುಂಡೆ, ಕವಲಪುರವಾಡಾ ಗ್ರಾಮಗಳಿಗೆ ಹಾಗೂ ಖಾನಾಪೂರ ತಾಲೂಕಿನ ಉಚವಡಾ, ಕುಸಮಳಿ, ಬೈಲೂರ, ಮೊರಬ, ಜಾಂಬೋಟಿ, ಓಲಮನಿ, ವಡಗಾಂವ, ದಾರೋಳಿ, ಚಾಪೋಲಿ, ಕಾಪೋಲಿ, ಮುಡವಿ, ಹಬ್ಬಾನಟ್ಟಿ, ದೇವಾಚಿಹಟ್ಟಿ, ತೋರಾಳಿ, ಗೋಲ್ಯಾಳಿ, ಬೆಟಗೇರಿ, ತಳೇವಾಡಿ, ಅಮಟೆ, ಕಾಲಮನಿ, ಚಿಕಲೆ, ಕಣಕುಂಬಿ, ಗವಸೆ, ಅಮಗಾಂವ, ಬೇಟ್ನೆ, ಪಾರವಾಡ, ಚಿಗುಳೆ, ಮಾನ, ಸಡಾ, ಚೋರ್ಲಾ, ಹಳೆ ಹಾಗೂ ಹೊಸ ಹುಳಂದ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‍ಸೆಟ್‍ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಏಪ್ರಿಲ್ 10 ರಂದು ಬೆಳಗಾವಿ ತಾಲೂಕಿನ ಮಚ್ಛೆ, ಬಳಗಾಮಟ್ಟಿ, ಕುಟ್ಟಲವಾಡಿ, ಬಾಮನವಾಡಿ, ಸಂತಿ ಬಸ್ತವಾಡ, ತೀರ್ಥಕುಂಡೆ, ಕಾಳೇನಟ್ಟಿ, ವಾಘವಾಡೆ, ರಂಗಧೋಳಿ, ಮಾರ್ಕಂಡೇಯ ನಗರ, ವಾಲ್ಮೀಕಿ ನಗರ, ಸಂತಿ ಬಸ್ತವಾಡ ಹಾಗೂ ಮಚ್ಚೆ ಔದ್ಯೋಗಿಕ ಕ್ಷೇತ್ರಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‍ಸೆಟ್‍ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹು.ವಿ.ಸ.ಕಂ.ನಿ ಬೆಳಗಾವಿಯ ಕಾ ಮತ್ತು ಪಾಲನಾ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////