Belagavi News In Kannada | News Belgaum

ರಾಜ್ಯದಲ್ಲಿ ನಾಲ್ಕು ಕಡೆ ಬಾಂಬ್ ಸ್ಫೋಟದ ಬೆದರಿಕೆ ಕರೆ: ಆಯುಕ್ತ ಪಂತ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ಎರಡು ಖಾಸಗಿ ಶಾಲೆಗಳಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆಯೊಡ್ಡಿದ ಘಟನೆ ನಡೆದಿದೆ.

ಬೆಂಗಳೂರಿನ ಹೊರವಲಯದಲ್ಲಿರುವ ವಿನ್ಸೆಂಟ್ ಪಲ್ಲೋಟಿ, ಎಬಿನೈಜರ್ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ಹಾಗೂ ಪೊಲೀಸರು ಭೇಟಿ ನೀಡಿದ್ದು, ವಿದ್ಯಾರ್ಥಿಗಳು, ಶಿಕ್ಷಕರನ್ನು ಶಾಲೆಯಿಂದ ಹೊರ ಕಳುಹಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.//////