Belagavi News In Kannada | News Belgaum

ನದಿಗೆ ಜಿಗಿದು ಅರಣ್ಯಾಧಿಕಾರಿ ಆತ್ಮಹತ್ಯೆ

ವಿಜಯಪುರ: ಅರಣ್ಯಾಧಿಕಾರಿಯೊಬ್ಬರು ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ನಡೆದಿದೆ.
ಕೃಷ್ಣಾ ನದಿಗೆ ಹಾರಿ ಕೊಲ್ಹಾರ ಅರಣ್ಯ ಇಲಾಖೆಯ ಅರಣ್ಯ ರಕ್ಷಕ ಈರಪ್ಪ ದುಂಡಪ್ಪ ದಟ್ಟಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಈರಪ್ಪ ಕಳೆದ ಸುಮಾರು 8 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.
ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದ ನಿವಾಸಿಯಾಗಿದ್ದ ಈರಪ್ಪ ಗುರುವಾರ ಮಧ್ಯಾಹ್ನ ಕೃಷ್ಣಾ ನದಿ ಸೇತುವೆ ಮೇಲೆ ತನ್ನ ಬೈಕ್ ನಿಲ್ಲಿಸಿದ್ದಾರೆ. ಬೈಕ್‍ನಲ್ಲಿ ಮೊಬೈಲ್ ಹಾಗೂ ಹಗ್ಗವನ್ನಿಟ್ಟು ತನ್ನ ಅರಣ್ಯ ಇಲಾಖೆಯ ಸಮವಸ್ತ್ರ ಸಹಿತ ಸೇತುವೆ ಮೇಲಿಂದ ನದಿಗೆ ಹಾರಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಈರಪ್ಪಾಗಾಗಿ ನದಿಯಲ್ಲಿ ಶೋಧ ಕಾರ್ಯ ಮುಂದುವರೆದಿದೆ. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ./////