Belagavi News In Kannada | News Belgaum

ಬೆಲೆ ಏರಿಕೆ ವಿರುದ್ಧ ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ನವೀನ್ ಗೌಡ ಅಧ್ಯಕ್ಷತೆಯಲ್ಲಿ ಪ್ರತಿಭಟನೆ

 

ಕೋಲಾರ:: ತಾಲೂಕಿನ ಕೆಂದಟ್ಟಿ ಗೇಟ್ ಬಳಿ ಇರುವ ಪೆಟ್ರೋಲ್ ಬಂಕ್ ಮುಂದೆ ಪೆಟ್ರೋಲ್, ಡೀಸೆಲ್‌, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಗ್ರಾಮಂತರ ಯುವ ಕಾಂಗ್ರೆಸ್ ಅಧ್ಯಕ್ಷ ನವೀನ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ *ನವೀನ್ ಗೌಡ* ತೈಲ ಬೆಲೆ ಏರಿಕೆ ಮೂಲಕ ಸರ್ಕಾರ ಜನಸಾಮಾನ್ಯರ ಜೀವನದ ಜೊತೆ ಆಟವಾಡುತ್ತಿರುವ ಸರ್ಕಾರದ ವಿರುದ್ಧ ನಮ್ಮ ಪ್ರತಿಭಟನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪೆಟ್ರೋಲ್, ಡೀಸಲ್, ಅಡುಗೆ ಅನೀಲ ಸೇರಿದಂತೆ ಎಲ್ಲಾ ಬೆಲೆ ಏರಿಕೆಯಾಗುತ್ತಿದೆ. ಮೋದಿ ಸರಕಾರ ಬರೀ ಸುಳ್ಳು ಹೇಳುತ್ತಿದೆ. ಇಂತಹ ಸುಳ್ಳು ಸರಕಾರ ಸೋಲಿಸಿ, ಯುವ ಕಾಂಗ್ರೆಸ್ ಜೊತೆ ಕೈಜೋಡಿಸಿ ಎಂದು ಜನತೆಗೆ ಕರೆ ನೀಡಿದರು.

ವಕ್ಕಲೇರಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ *ಮುರಳಿ ಎನ್* ಮಾತನಾಡಿ ಪಂಚ ರಾಜ್ಯ ಚುನಾವಣೆ ಸಂದರ್ಭದಲ್ಲಿ ಕೇಂದ್ರ ಸರಕಾರ ದೇಶದಲ್ಲಿ ತೈಲ ಬೆಲೆ ಕಡಿಮೆ ಮಾಡಿತ್ತು. ಚುನಾವಣೆ ಮುಗಿಯುತ್ತಿದ್ದಂತೆಯೇ ಮತ್ತೆ 20 ರೂಪಾಯಿ ಹೆಚ್ಚಳ ಮಾಡಿದ್ದಾರೆ. ಇಂತಹ ಲೂಟಿಕೋರ, ಪಿಕ್ ಪಾಕೇಟ್ ಸರಕಾರಕ್ಕೆ ಜನ ಪಾಠ ಕಲಿಸಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಗಜೇಂದ್ರ ಗೌಡ,ಮಧು,ಮುರಳಿ,ಸಿದ್ದು,ನಾರಾಯಣಸ್ವಾಮಿ,ಅಶೋಕ್ ವಂದನ್, ಶಿವು, ಮತ್ತು ಅನೇಕ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು