Belagavi News In Kannada | News Belgaum

ಜಗತ್ತಿಗೆ ಶಾಂತಿ ಸಾರಿದ ಮಹಾವೀರ ಚಿಂತನೆಗಳು ಎಲ್ಲರಿಗೂ ದಾರಿದೀಪ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಭಗವಾನ್ ಮಹಾವೀರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಗಣ್ಯರು

 

ಬೆಳಗಾವಿ: ಅಹಿಂಸಾ ಪರಮೋ ಧರ್ಮಃ ಎಂದು ಜಗತ್ತಿಗೆ ಶಾಂತಿ ಸಾರಿದ ಜೈನ ಧರ್ಮದ ಮಹಾವೀರ ತೀರ್ಥಂಕರ ಚಿಂತನೆಗಳು ಎಲ್ಲರಿಗೂ ದಾರಿದೀಪವಾಗಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಂಡಿದ್ದ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಭಗವಾನ್‌ ಮಹಾವೀರರು ಬೋಧಿಸಿದ ಪಂಚಾಮೃತ ತತ್ವಗಳಾದ ಸತ್ಯ, ಅಹಿಂಸೆ, ಅಪರಿಗೃಹ, ಅಶೌರ್ಯ, ಬ್ರಹ್ಮಚಾರ್ಯ ತತ್ವಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮಹಾವೀರರು ಅಹಿಂಸೆ, ಸತ್ಯ, ಅಚೌರ್ಯ, ಬ್ರಹ್ಮಚರ್ಯ ಹಾಗೂ ಅಪರಿಗ್ರಹವೆಂಬ ಪಂಚಶೀಲ ತತ್ತ್ವವನ್ನು ಬೋಧಿಸಿದರು. ಭಗವಾನ್‌ ಮಹಾವೀರರು ತಮ್ಮ ಬೋಧನೆಗಳ ಮೂಲಕ ಜನರಲ್ಲಿ ವೈಚಾರಿಕ ಬದಲಾವಣೆ ಉಂಟು ಮಾಡಿದ್ದರು ಎಂದು ಹೇಳಿದರು.

ಈದಕ್ಕೂ ಮೊದಲು ಭಗವಾನ್ ಮಹಾವೀರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಬೆಳಗಾವಿ ನಗರ ಅಧ್ಯಕ್ಷ ರಾಜು ಸೇಠ್, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಎಂ.ಜೆ, ಮಾಜಿ ಶಾಸಕ ಶ್ಯಾಮ ಘಾಟಗೆ, ಸುನೀಲ್ ಹನಮಣ್ಣವರ್, ಕಾಂಗ್ರೆಸ್ ಮುಖಂಡರಾದ ಗಜಾನನ ಮಂಗಸೂಳಿ, ಸುನೀಲ್ ಸಂಕ, ಸದಾಶಿವ ಬೂಟಾಳಿ, ಸಿದ್ದಾರ್ಥ ಸಿಂಗೆ, ಪರುಶುರಾಮ ಧಗೆ, ಯಮಕನಮರಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೀರಣ್ಣ ಬಿಸಿರೊಟ್ಟಿ ಸೇರಿದಂತೆ ಬೆಳಗಾವಿ ಜಿಲ್ಲೆಯ ಎಲ್ಲ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.