Belagavi News In Kannada | News Belgaum

ಬೆಳಗಾವಿಯ ಸಂತೋಷ್ ಆತ್ಮಹತ್ಯೆಗೆ ಸಚಿವ ಈಶ್ವರಪ್ಪ ನೇರಕಾರಣ: ಶಾಸಕ ಜಮೀರ್ ಅಹ್ಮದ್ ಆರೋಪ

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಸಾವಿಗೆ ಸಚಿವ ಈಶ್ವರಪ್ಪ ಅವರ ನೇರ ಕಾರಣ, ಈ ಹಿನ್ನೆಲೆಯಲ್ಲಿ ಅವರು ತಕ್ಷಣವೇ ರಾಜೀನಾಮೆ ನೀಡಬೇಕು, ಅವರು ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಚಾಮರಾಜಪೇಟೆ ಶಾಸಕ ಬಿ ಝಡ್ ಜಮೀರ್ ಅಹಮದ್ ಖಾನ್ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಚೋಷ್ ಪಾಟೀಲ್ ಕುಟುಂಬಕ್ಕೆ ನ್ಯಾಯ ದೊರೆಯುವವರೆಗೂ ಈ ಹೋರಾಟ ಮುಂದುವರೆಯಲಿದೆ ಎಂದು ಅವರು ತಿಳಿಸಿದರು. ಈ ಹಿಂದೆ ಪೊಲೀಸ್ ಅಧಿಕಾರಿ ಗಣಪತಿ ಅವರ ವಿಚಾರದಲ್ಲಿ ಆರೋಪ ಬಂದ ಕೂಡಲೇ ಸಚಿವರಾಗಿದ್ದ ಕೆ ಜೆ ಜಾರ್ಜ್ ಅವರು ರಾಜೀನಾಮೆ ಸಲ್ಲಿಸಿದ್ದರು. ನಂತರ ಆರೋಪದಿಂದ ಮುಕ್ತರಾದ ಮೇಲೆ ಮತ್ತೆ ಸಚಿವರಾಗಿದ್ದರು. ಅದೇ ರೀತಿಯಲ್ಲಿ ಈಶ್ವರಪ್ಪ ಅವರು ತಮ್ಮ ಸಚಿವ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು. ಇಲ್ಲಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅವರ ರಾಜೀನಾಮೆಯನ್ನು ಪಡೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ./////