Belagavi News In Kannada | News Belgaum

ಈಶ್ವರಪ್ಪ ಮಗ ಸಂತೋಷ್ ಗೆ ಧಮ್ಕಿ ಹಾಕಿದ್ದರು: ಲಕ್ಷ್ಮೀ ಹೆಬ್ಬಾಳ್ಕರ್ ಸ್ಫೋಟಕ ಹೇಳಿಕೆ

ಬೆಳಗಾವಿ: ‘ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರಿಗೆ ಸಚಿವ ಕೆ.ಎಸ್. ಈಶ್ವರಪ್ಪ ಅವರ ಪುತ್ರ ಹಾಗೂ ಮತ್ತೊಬ್ಬ ಪ್ರಭಾವಿ ಶಾಸಕ ಧಮ್ಕಿ ಹಾಕಿದ್ದರು ಎಂಬ ಮಾಹಿತಿ ಇದೆ ಎಂದು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಬುಧವಾರ ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪಕ್ಷದಿಂದ ನಡೆಸಿದ ಪ್ರತಿಭಟನೆ ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘ಯಾರ‍್ಯಾರು ಧಮಕಿ ಹಾಕಿದ್ದರು ಎನ್ನುವ ವಿವರವನ್ನು ಪಕ್ಷದ ನಾಯಕರು ಶೀಘ್ರದಲ್ಲೇ ಬಹಿರಂಗಪಡಿಸಲಿದ್ದಾರೆ’ ಎಂದರು.

‘ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇದರಿಂದ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಾಗಿದೆ. ಇಡೀ ಕಾಂಗ್ರೆಸ್ ಪಕ್ಷ ಸಂತೋಷ್ ಕುಟುಂಬದ ಜೊತೆಗಿದೆ. ಇದು ರಾಜಕೀಯವಲ್ಲ. ಸಾವಿನ ಮನೆಯಲ್ಲಿ ರಾಜಕಾರಣ ಮಾಡುವ ಅನಿವಾರ್ಯ ನಮ್ಮ ಪಕ್ಷಕ್ಕೆ ಬಂದಿಲ್ಲ. ಬಿಜೆಪಿಯವರಿಗೆ ಇರಬಹುದು ಎಂದು ಟೀಕಿಸಿದರು./////