Belagavi News In Kannada | News Belgaum

ಮರಕ್ಕೆ ವಾಹನ ಡಿಕ್ಕಿ: ಸ್ಥಳದಲ್ಲೇ ಮೂವರು ಸಾವು

ಶಿವಮೊಗ್ಗ: ಕಾರ್ಯಕ್ರಮವೊಂದಕ್ಕೆ ತೆರಳಿ, ಮರಳಿ ಗ್ರಾಮಕ್ಕೆ ತೆರಳುತ್ತಿದ್ದಂತ ಟಾಟಾಏಸ್ ವಾಹನವೊಂದು, ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಹಲವರು ಗಾಯಗೊಂಡಿರೋ ಘಟನೆ ಸೊರಬ ತಾಲೂಕಿನ ಚಿತ್ರಟ್ಟಹಳ್ಳಿ ಗ್ರಾಮದ ಬಳಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ತವನಂದಿ ಗ್ರಾಮದ ಜನರು, ಸಾಗರ ಸಮೀಪದ ಗುತ್ತನಹಳ್ಳಿ ಗ್ರಾಮದಲ್ಲಿ ನಡೆದಂತ ಕಾರ್ಯಕ್ರಮಕ್ಕೆ ಟಾಟಾಏಸ್ ನಲ್ಲಿ ತೆರಳಿ, ಭೋಜನದ ಬಳಿಕ, ತಮ್ಮ ತವನಂದಿ ಗ್ರಾಮಕ್ಕೆ ವಾಪಾಸ್ ಆಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸೊರಬ ತಾಲೂಕಿನ ಚಿತ್ರಟ್ಟಹಳ್ಳಿ ಗ್ರಾಮದ ಬಳಿ ಮರಕ್ಕೆ ಡಿಕ್ಕಿಯಾಗಿದೆ.
ಟಾಟಾ ಏಸ್ ಮರಕ್ಕೆ ಡಿಕ್ಕಿಯಾದ ಪರಿಣಾಮ, ತವನಂದಿ ಗ್ರಾಮದ ಯೋಗರಾಜಪ್ಪ ನಿಂಗಪ್ಪ (57), ತಿಮ್ಮಪ್ಪ ಈರಪ್ಪ (45) ಹಾಗೂ ಆಕಾಶ್ ಹನುಮಂತಪ್ಪ (13) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಈ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವಂತ ಹಲವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.////