Belagavi News In Kannada | News Belgaum

ಮುಂದಿನ 3 ದಿನ ರಾಜ್ಯದಲ್ಲಿ ಗುಡುಗು ಸಹಿತ ಮಳೆ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಮುಂದಿನ 3 ದಿನಗಳೂ ಇದೇ ರೀತಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಶುಕ್ರವಾರ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ರಾಯಚೂರು, ಬೀದರ್ ಹಾಗೂ ಯಾದಗಿರಿ ಹೊರತುಪಡಿಸಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಕರಾವಳಿಯ ಬಹುತೇಕ ಕಡೆ ಗುಡುಗು-ಸಿಡಿಲು ಸಹಿತ ಮಳೆ ಸುರಿಯಲಿದೆ ಎಂದು ತಿಳಿಸಿದೆ.

 

ಬೆಂಗಳೂರಿನಲ್ಲಿ ಕಳೆದ 2 ದಿನಗಳಿಂದ ಮಳೆ ಸುರಿಯುತ್ತಿದ್ದು, ಇಂದು ಕೂಡಾ ಸಂಜೆ ವೇಳೆ ಭಾರೀ ಮಳೆ ಹಾಗೂ ಗುಡುಗು ಸಿಡಿಲಿನ ಮುನ್ಸೂಚನೆ ನೀಡಿದೆ. ನಾಳೆ ಬೆಳಗ್ಗೆ ಬೆಂಗಳೂರಿನಲ್ಲಿ ಮಂಜು ಕವಿಯುವ ಸಾಧ್ಯತೆಯಿದ್ದು, ಹಗುರವಾದ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.