ಸಂತೋಷ ಕುಟುಂಬಸ್ಥರಿಗೆ 11 ಲಕ್ಷ ರೂ. ಪರಿಹಾರ ಚೆಕ್ ವಿತರಣೆ

ಬೆಳಗಾವಿ: ಆತ್ಮಹತ್ಯೆಗೆ ಶರಣಾದ ಸಂತೋಷ ಮನೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಂಗಳವಾರ ಭೇಟಿ ನೀಡಿ, ಕುಟುಂಬಸ್ಥರ ಯೋಗಕ್ಷೇಮ ವಿಚಾರಿಸುವ ಮೂಲಕ 11 ಲಕ್ಷ ರೂ. ಪರಿಹಾರ ಚೆಕ್ನ್ನು ವಿತರಿಸಿದರು.
ತಾಲೂಕಿನ ಬಡಸ್ ಗ್ರಾಮದ ಸಂತೋಷ ಪಾಟೀಲ ಮನೆಗೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಸಂತೋಷ ಪತ್ನಿ ಜಯಶ್ರೀ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದರು.
ಈ ವೇಳೆ ಕಾಂಗ್ರೆಸ್ ಹಿರಿಯ ನಾಯಕ ಪ್ರಕಾಶ ಹುಕ್ಕೇರಿ ಅವರು ಸೂಚನೆ ಮೇರೆಗೆ ಆಪ್ತ ಸಹಾಯಕ 5 ಲಕ್ಷ ರೂ. ಪರಿಹಾರ ಚೆಕ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಶಾಸಕಿ ಅಂಜಲಿ ನಿಂಬಾಳಕರ್,ಎಂಎಲ್ ಸಿ ಚನ್ನರಾಜ್ ಹಟ್ಟಿಹೊಳಿ, ಶಾಸಕ ಮಹಾತೇಂಶ ಕೌಜಲಗಿ , ಮಾಜಿ ಶಾಸಕ ಪೀರೊಜ್ ಸೇಠ, ವಿನಯ ನಾವಲಗಟ್ಟಿ ಹಾಗೂ ಇತರರು ಇದ್ದರು.//////