Belagavi News In Kannada | News Belgaum

ಕೋವಿಡ್ ಉಲ್ಬಣದಿಂದ ದೆಹಲಿಯಲ್ಲಿ ಶಾಲೆಗಳು ಬಂದ್? – ತಜ್ಞರ ಸಮಿತಿಯ ಸಲಹೆಗಳೇನು?

ದೆಹಲಿಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳಿಂದ ಶಾಲಾ ಕಾಲೇಜುಗಳನ್ನು ಬಂದ್ ಮಾಡಿ, ಆನ್‌ಲೈನ್ ತರಗತಿಗಳನ್ನು ಪುನರಾರಂಭಿಸುವಂತೆ ತಜ್ಞರ ಸಮಿತಿ ಹೇಳಿದೆ ಎಂದು ವರದಿಯಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿನ ಪ್ರಸ್ತುತ ಕೋವಿಡ್ ಪರಿಸ್ಥಿತಿ ಚರ್ಚಿಸಲು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ (DDMA) ನಿರ್ಣಾಯಕ ಸಭೆ ನಡೆಯಲಿ ಸಿದ್ಧತೆ ನಡೆಸಲಾಗುತ್ತಿದೆ. ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಶಾಲೆಗಳಲ್ಲಿ ಶಿಕ್ಷಕರು ಹಾಗೂ ಬಹುತೇಕ ವಿದ್ಯಾರ್ಥಿಗಳಿಗೂ ಕೋವಿಡ್ ವ್ಯಾಪಿಸುತ್ತಿದೆ. ಆದ್ದರಿಂದ ಪೋಷಕರೂ ಸಹ ಶಾಲೆಗಳನ್ನು ಸಂಪೂರ್ಣ ಬಂದ್ ಮಾಡುವಂತೆ ಮನವಿ ಮಾಡಿದ್ದಾರೆ. ತಜ್ಞರೂ ಸಹ ಆಫ್‌ಲೈನ್ ತರಗತಿಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಸುದ್ದಿಸಂಸ್ಥೆಯೊAದು ವರದಿ ಮಾಡಿದೆ.

ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 632 ಹೊಸ ಪ್ರಕರಣಗಳು ವರದಿಯಾಗಿದ್ದು, ಸತತ 3ನೇ ದಿನ 500ಕ್ಕಿಂತಲೂ ಹೆಚ್ಚಿನ ಪ್ರಕರಣಗಳು ವರದಿಯಾಗಿರುವುದು ಕಂಡುಬAದಿದೆ. ಪಾಸಿಟಿವಿಟಿ ದರ ಶೇ.4ಕ್ಕೆ ಏರಿಕೆಯಾಗಿದೆ. ಆದಾಗ್ಯೂ ಇಲ್ಲಿವರೆಗೆ ಯಾವುದೇ ಸಾವು-ನೋವುಗಳಾಗಿಲ್ಲ ಎನ್ನುವುದು ಸಮಾಧಾನ ಎಂದು ತಜ್ಞರ ಸಮಿತಿ ಹೇಳುತ್ತಿದೆ.

ತಜ್ಞರ ಸಲಹೆ ಏನಿದೆ?: ಶಿಕ್ಷಣ ಹಾಗೂ ಆರೋಗ್ಯ ಇಲಾಖೆ ತಜ್ಞರ ಸಮಿತಿಯು, ದೆಹಲಿ ಶಾಲೆಗಳಿಗೆ ವಿದ್ಯಾರ್ಥಿಗಳು ಆನ್‌ಲೈನ್ ತರಗತಿಗಳ ಮೂಲಕ ಅಥವಾ ಆಫ್‌ಲೈನ್ ತರಗತಿಗಳ ಮೂಲಕ ತಮ್ಮ ಅಧ್ಯಯನ ಮುಂದುವರಿಸುವ ಆಯ್ಕೆ ಅನುಸರಿಸಬಹುದು. ಆದರೆ, ಆಫ್‌ಲೈನ್ ತರಗತಿಗಳನ್ನು ಅನುಸರಿಸಿದರೆ ಕ್ಯಾಂಪಸ್‌ನಲ್ಲಿ ಕೋವಿಡ್-19 ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಶಾಲಾ ಅಧಿಕಾರಿಗಳಿಗೆ ಅಥವಾ ಮೇಲ್ವಿಚಾರಕರಿಗೆ ನಿರ್ದೇಶನ ನೀಡಬೇಕಾಗುತ್ತದೆ. ಈ ಬಗ್ಗೆ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಾಸ್ಕ್ ಉಲ್ಲಂಘೆನೆ- ದಂಢ ವಿಧಿಸುವ ಚಿಂತನೆಯಿಲ್ಲ: ಸದ್ಯಕ್ಕೆ ದೆಹಲಿಯಲ್ಲಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಚಿಂತನೆಯನ್ನು ಸರ್ಕಾರ ಮಾಡಿಲ್ಲ ಎಂದು ದೆಹಲಿ ಉಪಮುಖ್ಯಮಂತ್ರಿ ಮನಿಷ್ ಸಿಸೋಡಿಯ ಹೇಳಿದ್ದಾರೆ.