ʻಹೊಂಬಾಳೆ ಫಿಲ್ಮ್ಸ್ʼ ಹೊಸ ಸಿನಿಮಾ ಅನೌನ್ಸ್: ಭರ್ಜರಿ ಅವಕಾಶ ಗಿಟ್ಟಿಸಿಕೊಂಡ `ಸೂರರೈ ಪೋಟ್ರು’ ನಿರ್ದೇಶಕಿ

ದೇಶಾದ್ಯಂತ ಸಂಚಲನ ಮೂಡಿಸುತ್ತಿರುವ `ಹೊಂಬಾಳೆ ಫಿಲ್ಮ್ಸ್ʼ ಸಂಸ್ಥೆ `ಕೆಜಿಎಫ್ ಚಾಪ್ಟರ್ 2′ ಯಶಸ್ಸಿನಿಂದ ಸದ್ಯ ಭಾರೀ ಸುದ್ದಿ ಮಾಡ್ತಿದೆ. ಹೀಗೆ ಒಂದಲ್ಲಾ ಒಂದು ವಿಚಾರವಾಗಿ ಸೌಂಡ್ ಮಾಡ್ತಿರೋ ಹೊಂಬಾಳೆ ಬ್ಯಾನರ್ನಿಂದ ನಿರ್ದೇಶಕಿ ಸುಧಾ ಕೊಂಗರ ಅವರಿಗೆ ಚಿತ್ರ ಮಾಡುವ ಅವಕಾಶ ಸಿಕ್ಕಿದೆ. ಈ ಬಗ್ಗೆ ಬ್ರೇಕಿಂಗ್ ನ್ಯೂಸ್ ಹೊರಬಿದ್ದಿದೆ.
ಸಿನಿಮಾರಂಗದಲ್ಲಿ ಮೈಲಿಗಲ್ಲು ನಿರ್ಮಾಣ ಮಾಡಿರುವ ಸಂಸ್ಥೆಯಿಂದ ಅನೇಕ ಚಿತ್ರಗಳು ನಿರ್ಮಾಣವಾಗುತ್ತಿದೆ. ಈಗ ಚಿತ್ರ ಕೂಡ ಅನೌನ್ಸ್ ಮಾಡಲಾಗಿದೆ. ಮತ್ತೊಂದು ವಿಶೇಷ ಅಂದ್ರೆ, ಈ ಬಾರಿ ʻಹೊಂಬಾಳೆ ಫಿಲ್ಮ್ಸ್ʼ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ದೇಶನ ಮಾಡುವ ಅವಕಾಶವನ್ನು ಕಾಲಿವುಡ್ ಲೇಡಿ ನಿರ್ದೇಶಕಿ ಸುಧಾ ಕೊಂಗರ ಗಿಟ್ಟಿಸಿಕೊಂಡಿದ್ದಾರೆ.
ನಿರ್ದೇಶಕಿ ಸುಧಾ ಕೊಂಗರ ಅವರು ಮೂಲತಃ ಆಂಧ್ರ ಪ್ರದೇಶದವರಾಗಿದ್ದು, ಅವರು ತಮಿಳು ಸಿನಿಮಾರಂಗದಲ್ಲಿ ಸಾಧನೆ ಮಾಡಿದ್ದಾರೆ. ಡಿಫರೆಂಟ್ ಸಬ್ಜೆಕ್ಟ್ಗಳನ್ನ ತೆರೆಯ ಮೇಲೆ ತೋರಿಸುವಲ್ಲಿ ಸೈ ಎನಿಸಿಕೊಂಡಿದ್ದಾರೆ. ಈ ಹಿಂದೆ ಸೂರ್ಯ ನಟನೆಯ `ಸೂರರೈ ಪೋಟ್ರು’ ನಿರ್ದೇಶನ ಮಾಡಿ ಗಮನ ಸೆಳೆದಿದ್ದರು.
ಕಾಲಿವುಡ್ ಪ್ರತಿಭಾವಂತ ನಿರ್ದೇಶಕಿ ಸುಧಾ ಕೊಂಗರ ಅವರ ಕೆಲಸ ಗುರುತಿಸಿ ಇದೀಗ ಹೊಂಬಾಳೆ ಸಂಸ್ಥೆಯಡಿ ನಿರ್ದೇಶನ ಮಾಡುವ ಅವಕಾಶವನ್ನು ಕೊಟ್ಟಿದ್ದಾರೆ. ಹಾಗಂತ ಅಧಿಕೃತವಾಗಿ `ಹೊಂಬಾಳೆ ಫಿಲ್ಮ್ಸ್ʼ ಟ್ವಿಟರ್ನಲ್ಲಿ ಘೋಷಿಸಿದ್ದಾರೆ. ಸುಧಾ ಕೊಂಗರ ಅವರಿಗೆ `ಹೊಂಬಾಳೆ ಫಿಲ್ಮ್ಸ್’ ಮೂಲಕ ವಿಜಯ್ ಕಿರಗಂದೂರು ಸಾಥ್ ನೀಡಿರುವುದು ಅಭಿಮಾನಿಗಳಲ್ಲಿ ನಿರೀಕ್ಷೆ ಮೂಡಿಸಿದೆ.