Belagavi News In Kannada | News Belgaum

ಬೆಂಗಳೂರಿನಲ್ಲಿ ಬೀದಿ ನಾಯಿ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದ ಕಿರಾತಕ

ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ರಸ್ತೆ ದಾಟುತ್ತಿದ್ದ ಬೀದಿ ನಾಯಿ ಮೇಲೆ ಕಾರು ಹತ್ತಿಸಿ ವ್ಯಕ್ತಿಯೋರ್ವ ವಿಕೃತಿ ಮೆರೆದಿದ್ದಾನೆ.

ಏಪ್ರಿಲ್ 19ರಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆದಿದೆ. ನಗರದ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ದಾಟುತ್ತಿದ್ದ ಬೀದಿ ನಾಯಿ ಮೇಲೆ ಕಾರು ಹತ್ತಿಸಿದ್ದಾನೆ. ಬಳಿಕ ಕಾರು ನಿಲ್ಲಿಸದೇ ಅಲ್ಲಿಂದ ತೆರಳಿದ್ದಾನೆ. ಅಪಘಾತಕ್ಕೊಳಗಾದ ನಾಯಿ ನಡುರಸ್ತೆಯಲ್ಲೇ ವಿಲವಿಲ ಒದ್ದಾಡಿದೆ. ಘಟನೆ ನಡೆದ ಒಂದು ಗಂಟೆಯ ಬಳಿಕ ಮೃತಪಟ್ಟಿದೆ.

ನಾಯಿ ಮೇಲೆ ಕಾರು ಹತ್ತಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸತ್ಯನಾರಾಯಣ ಎಂಬ ವ್ಯಕ್ತಿಗೆ ಘಟನೆ ಸಂಬಂಧ ಎಫ್​ಐಆರ್​ ದಾಖಲಿಸಿಕೊಂಡ ಪೊಲೀಸರು, ಕಾರು ಮಾಲೀಕ ಸತ್ಯನಾರಾಯಣ ಎಂಬಾತನ ಹುಡುಕಾಟಕ್ಕೆ ಇಳಿದಿದ್ದಾರೆ