Belagavi News In Kannada | News Belgaum

ಹೆತ್ತ ಮಕ್ಕಳ ಮುಂದೆಯೇ ಮಹಿಳೆಗೆ ಚಾಕುವಿನಿಂದ ಇರಿದ ದುಷ್ಕರ್ಮಿ

ಹೆತ್ತ ಮಕ್ಕಳ ಮುಂದೆಯೇ ಮಹಿಳೆಯೊಬ್ಬಳನ್ನು ವ್ಯಕ್ತಿಯೋರ್ವ ಚಾಕುವಿನಿಂದ ಇರಿದು ಕೊಂದಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

ಘಟನೆ ಕುರಿತಂತೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸಾಗರ್ ಪುರ್ ಪೊಲೀಸ್ ಠಾಣೆಗೆ ಕರೆಬಂದಿದ್ದು, ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ತಲುಪಿ, ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವನ್ನಪ್ಪಿದ್ದಾಳೆ.

ಸದ್ಯ ಘಟನೆ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮಹಿಳೆ ತನ್ನ ಮಕ್ಕಳೊಂದಿಗೆ ಮನೆಗೆ ಹೋಗುತ್ತಿದ್ದ ವೇಳೆ ಆರೋಪಿ ಆಕೆಯನ್ನು ಹಿಂಬಾಲಿಸಿದ್ದಾನೆ. ನಂತರ ಮಹಿಳೆಗೆ ಚಾಕುವಿನಿಂದ ಇರಿದು ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತಂತೆ ತನಿಖೆ ವೇಳೆ ಮಹಿಳೆ ಮತ್ತು ಆರೋಪಿ ಈ ಹಿಂದೆ ನೆರೆಹೊರೆಯವರಾಗಿದ್ದರು. ಆದರೆ ಕೊಲೆ ಮಾಡಲು ಕಾರಣವೇನು ಎಂಬುವುದರ ಬಗ್ಗೆ ಸ್ಪಷ್ಟವಾದ ಮಾಹಿತಿ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಆರೋಪಿ ವಿರುದ್ಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದು, ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ