Belagavi News In Kannada | News Belgaum

ನೇಮಕಾತಿ ಅಕ್ರಮ: ತಪ್ಪಿತಸ್ಥರ ವಿರುದ್ಧಸೂಕ್ತ ಕ್ರಮವೆಂದ ಸಿಎಂ

ಬೆಂಗಳೂರು: ಪಿಎಸ್ಐ ನೇಮಕಾತಿಯ ಯಾವುದೇ ಬ್ಯಾಚ್‌ ನಲ್ಲಿ ಅಕ್ರಮವಾಗಿದ್ದರೂ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

 

ಅವರಿಂದು ಮಾಧ್ಯಮದವರೊಂದಿಗೆ ಮಾತನಾಡಿ, ಶಾಸಕ ಪ್ರಿಯಾಂಕ ಖರ್ಗೆ ಬಿಡುಗಡೆ ಮಾಡಿರುವ ಆಡಿಯೋ ನಾನು ಕೇಳಿಲ್ಲ. ಯಾವ ಮೆಟೀರಿಯಲ್ ಇದ್ದರೂ ತನಿಖೆಯಾಗುತ್ತದೆ. ಇಬ್ಬರ ನಡುವೆ ಮಾತುಕತೆಯಾಗಿದೆ. ]

ಅವರಿಬ್ಬರು ಯಾರು? ಅವರ ಅರ್ಹತೆ ಏನು? ವಿಶ್ವಾಸಾರ್ಹತೆ ಏನೆಂಬುದು ತನಿಖೆಯಲ್ಲಿ ತಿಳಿಯುತ್ತದೆ. ಆಡಿಯೋವನ್ನು ಸಹ ತನಿಖೆಗೆ ಒಳಪಡಿಸಿ ಯಾರೇ ತಪ್ಪಿತಸ್ಥರಿದ್ದರೂ ಯಾವುದೇ ಬ್ಯಾಚ್ ಆಗಿದ್ದರೂ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.