Belagavi News In Kannada | News Belgaum

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆ ಮತ್ತು ಕಾನೂನು ಅರಿವು ಕಾರ್ಯಾಗಾರ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆ ಮತ್ತು ಕಾನೂನು ಅರಿವು ಕಾರ್ಯಾಗಾರದ ಪತ್ರಿಕಾ ವರದಿ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಬೆಳಗಾವಿ, ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಬೆಳಗಾವಿ ಹಾಗೂ ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟ, ಬೆಳಗಾವಿ ಇವರುಗಳ ಸಂಯುಕ್ತಾಶ್ರಯದಲ್ಲಿ ದಿನಾಂಕ: 28-04-2022 ರಂದು ಮಹೇಶ್ವರಿ ಅಂಧ ಮಕ್ಕಳ ಸೇವಾ ಸಂಸ್ಥೆ, ನೆಹರು ನಗರ, ಬೆಳಗಾವಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆ ಮತ್ತು ಕಾನೂನು ಅರಿವು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

 

ಕಾರ್ಯಕ್ರಮದ ಉದ್ಘಾಟಕರಾದ ಶ್ರೀ ವಿಜಯ ದೇವರಾಜ ಅರಸ್, ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಬೆಳಗಾವಿ ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಮಹಿಳೆಯರಿಗೆ ಕಾನೂನಿನ ಅರಿವು ಇರಬೇಕಾಗಿರುವುದು ಬಹಳ ಅವಶ್ಯಕವಾಗಿದ್ದು, ದಿನನಿತ್ಯ ಬಳಕೆಯಾಗುವ ಕಾನೂನುಗಳ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚು ಹಮ್ಮಿಕೊಳ್ಳಬೇಕಾಗಿದೆ. ಶಾಲೆಗಳಲ್ಲಿ, ಮನೆಗಳಲ್ಲಿ ಮಕ್ಕಳಿಗೆ ಲೈಂಗಿಕ ಶಿಕ್ಷಣದ ಬಗ್ಗೆ ಅರಿವು ಮೂಡಿಸಬೇಕಾಗಿದೆ. ಈ ಮೂಲಕ ಲೈಂಗಿಕ ಅಪರಾದಗಳಿಂದ ಮಕ್ಕಳನ್ನು ರಕ್ಷಿಸಬಹುದಾಗಿದೆ. ಹಕ್ಕು ಪಡೆಯುವಲ್ಲಿ ಮಹಿಳೆಯರು ಹೋರಾಟ ಮಾಡಬೇಕಿಲ್ಲ ಅನುಭವಿಸಿ ಗಳಿಸಬೇಕಾಗಿದೆ ಎಂದು ಮಹಿಳೆಯರ ಹಕ್ಕುಗಳ ಹಾಗೂ ಸಮಾನತೆ ಕುರಿತು ಮಾತನಾಡಿದರು.

 

ಶ್ರೀ. ರಾಮಮೂರ್ತಿ ಕೆ ವಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಬೆಳಗಾವಿ ಇವರು ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರೆಲ್ಲರನ್ನು ಸ್ವಾಗತಿಸಿಕೊಂಡು, ಲಿಂಗ ತಾರತಮ್ಯದಿಂದ ಕೂಡಿದ ಸಮಾಜದಲ್ಲಿ ಬದಲಾವಣೆ ತರುವಲ್ಲಿ ಸಂವಿಧಾನ ಪಾತ್ರ ಬಹುಮುಖ್ಯವಾಗಿದ್ದು, ಸಾಮಾಜಿಕ ಚಟುವಟಿಕೆಗಳಲ್ಲಿ ಸ್ತ್ರೀಯರ ಸಹಭಾಗಿತ್ವಕ್ಕೆ ಸಂಬಂಧಿಸಿದಂತೆ ಇನ್ನೂ ಹೆಚ್ಚಿನ ಬದಲಾವಣೆಗಳಾಗಬೇಕಿದೆ. ಒಂದು ಹಕ್ಕಿ ಒಂದು ರೆಕ್ಕೆಯಿಂದ ಹಾರಲು ಹೇಗೆ ಸಾಧ್ಯವಿಲ್ಲವೊ ಅದೇ ರೀತಿ ದೇಶದಲ್ಲಿ ಮಹಿಳೆಯರ ಸಹಭಾಗಿತ್ವ ಇಲ್ಲದೆ

 

ದೇಶದ ಅಭಿವೃದ್ಧಿ ಸಾಧ್ಯವಿಲ್ಲ ಎಂಬ ಸ್ವಾಮಿ ವಿವೇಕಾನಂದರ ನುಡಿಯನ್ನು ಪ್ರಸ್ತಾಪಿಸುವ ಮೂಲಕ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದ ಉದ್ಘಾಟಕರಾದ ಶ್ರೀ ವಿಜಯ ದೇವರಾಜ ಅರಸ್, ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಬೆಳಗಾವಿ ಇವರು ಹಸಿರೇ ಉಸಿರು, ಉಸಿರೇ ಹಸಿರು ಎಂಬುದರ ದ್ಯೋತಕವಾಗಿ ಸಸಿಗೆ ನೀರೆರೆಯುವ ಮೂಲಕ ಗಣ್ಯರೆಲ್ಲರು ಸೇರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

 

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶ್ರೀಮತಿ ಸಯೀದಾ ಆಫ್ರೀÀನ್‍ಭಾನು ಬಳ್ಳಾರಿ, ಮುಖ್ಯ ಆಡಳಿತಾಧಿಕಾರಿಗಲು ಬೀಮ್ಸ್ ಬೆಳಗಾವಿ ಇವರು ಲಿಂಗ ಸಮಾನತೆ ಕುರಿತು ಮಾತನಾಡಿ, ಸಂವಿಧಾನದ ಮೂಲಕÀ ಸಮಾನತೆ ಹಕ್ಕು ಮಹಿಳೆಯರಿಗೆ ದೊರಕಿದ್ದರು, ಪೂರ್ಣ ಪ್ರಮಾಣದಲ್ಲಿ ಲಿಂಗ ಸಮಾನತೆ ಸಾಧಿಸುವಲ್ಲಿ ನಾವಿಂದು ವಿಫಲರಾಗಿದ್ದು,

 

ಲಿಂಗ ಸಮಾನತೆ ಎನ್ನುವುದು ನಮ್ಮ ಮನೆಯಿಂದಲೇ ಪ್ರಾರಂಭವಾಗಬೇಕಿದೆ, ಮಹಿಳೆಯರು ಸುಶಿಕ್ಷಿತರು, ಆರ್ಥಿಕ ಸ್ವಾವಲಂಭಿಗಳು, ಸ್ವ ನಿರ್ಧಾರ ತೆಗೆದುಕೊಳ್ಳುವಿಕೆ ಹಾಗೂ ಕಾನೂನು ಅರಿವುಳ್ಳವರಾಗಬೇಕು ಅಂದಾಗ ಮಾತ್ರ ಮಹಿಳಾ ಸಬಲೀಕರಣ ಸಾಧ್ಯ ಎಂದು ಮಹಿಳೆಯರನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶ್ರೀಮತಿ ಭಾರತಿ ವಾಳ್ವೇಕರ ಸದಸ್ಯರು, ರಾಜ್ಯ ಮಕ್ಕಳ ಹಕ್ಕುಗಳ ಆಯೋಗ, ಬೆಂಗಳೂರು ಇವರು ಜೀವನದ ಪ್ರತಿ ಹಂತದಲ್ಲು ಹೆಣ್ಣು ಮಕ್ಕಳು ಶೋಷಣೆಗೆ ಒಳಗಾಗುತ್ತಿದ್ದು, ಎಲ್ಲವನ್ನು ಸಹಿಸಿಕೊಳ್ಳುವ ಮೂಲಕ ಕಾನೂನುಗಳ ಸರಿಯಾದ ಬಳಕೆಯಾಗುತ್ತಿಲ್ಲ. ಆದ್ದರಿಂದ ಕಾಯ್ದೆ ಕಾನೂನುಗಳ ಅನುಷ್ಠಾನದಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯವಾಗಿದೆ. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಹಾಗೂ ಮಹಿಳೆಯರು ತಮ್ಮ ರಕ್ಷಣೆಗಾಗಿ ಕಾನೂನಿನ ಅರಿವು ಹೊಂದಿರುವುದು ಅವಶ್ಯಕವಾಗಿದೆ. ಮಹಿಳೆಯರು ಆರ್ಥಿಕ ಸ್ವಾವಲಂಭಿಗಳಾಗಿ ಆತ್ಮ ಗೌರವದಿಂದ ಬದುಕಬೇಕು ಎಂದು ಸ್ತ್ರೀ ದುಡಿಮೆಯ ಮಹತ್ವದ ಬಗ್ಗೆ ಮಾತನಾಡಿದರು.

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ರಿ ಯೋಜನೆಯಡಿ ಪ್ರಶಸ್ತಿ ಪುರಸ್ಕøತ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಪ್ರಶಸ್ತಿ, ಪ್ರಮಾಣ ಪತ್ರ ವಿತರಣೆ ಹಾಗೂ ರಾಜ್ಯ ಮಟ್ಟದ ಶೌರ್ಯ ಪ್ರಶಸ್ತಿ ಪುರಸ್ಕøತರಿಗೆ ಸನ್ಮಾನ ಕಾರ್ಯಕ್ರಮವನ್ನು ಗಣ್ಯರೆಲ್ಲರು ನಡೆಸಿಕೊಟ್ಟರು. ನಂತರ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ ಹಾಗೂ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು ಕಾನೂನು ಅರಿವು ಕಾರ್ಯಾಗಾರವನ್ನು ನಡೆಸಲಾಯಿತು.
ಕಾರ್ಯಕ್ರದ ಅಧ್ಯಕ್ಷರಾದ ಶ್ರೀಮತಿ ಪ್ರಭಾವತಿ ಪತ್ತಾರ, ಅಧ್ಯಕ್ಷರು ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ ಬೆಳಗಾವಿ, ಅಂಗನವಾಡಿ ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಸ್ವ ಸಹಾಯ ಸಂಘದ ಸದಸ್ಯರು, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಇಲಾಖೆಯ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.