ಬೆಳಗಾವಿ ಜಿಲ್ಲೆಯ ವಿಭಜನೆಗೆ ಇನ್ನೂ ಯಾವುದೇ ನಿರ್ಣಯ ಮಾಡಿಲ್ಲ: ಸಿಎಂ ಬೊಮ್ಮಾಯಿ

ಬೆಳಗಾವಿ: ಬೆಳಗಾವಿ ಜಿಲ್ಲೆಯ ವಿಭಜನೆಗೆ ಇನ್ನೂ ಯಾವುದೇ ನಿರ್ಣಯ ಮಾಡಿಲ್ಲ. ಬೆಳಗಾವಿ ವಿಭಜನೆ ಅನೇಕ ವರ್ಷಗಳಿಂದ ಚರ್ಚೆಯಲ್ಲಿಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯಲ್ಲಿ ಎರಡು, ಮೂರು ಜಿಲ್ಲೆಗಳ ಬಗ್ಗೆ ಪ್ರಸ್ತಾಪವಿದೆ. ಗಡಿಭಾಗದ ಜಿಲ್ಲೆ ಇದ್ದು ಬೇಡ ಎಂದು ಅಂದಿನಿ ಸಿಎಂ ಜೆ.ಎಚ್.ಪಟೇಲ್ ಇದ್ದಾಗ ಹೇಳಿದ್ರು. ಈಗ ಮತ್ತೆ ಜನರ ತಮ್ಮ ಒತ್ತಾಸೆಯನ್ನು ವ್ಯಕ್ತಪಡಿಸಿದ್ದಾರೆ. ಕರ್ನಾಟಕ, ಜಿಲ್ಲೆ ಹಿತದೃಷ್ಟಿಯಿಂದ ಸೂಕ್ತ ತೀರ್ಮಾನ ಮಾಡುತ್ತೇನೆ ಎಂದರು.
ರಾಜ್ಯದಲ್ಲಿ ಮತ್ತೆ ಸಾರಿಗೆ ಮುಷ್ಕರ ವಿಚಾರಕ್ಕೆ, ಇದನ್ನು ಸಾರಿಗೆ ಸಚಿವರು ನೋಡಿಕೊಳ್ಳುತ್ತಾರೆ ಎಂದು ಪ್ರತಿಕ್ರಿಯೆ ನೀಡಿದರು. ಇದೇ ವೇಳೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ರಾಣಿ ಚೆನ್ನಮ್ಮ ಹೆಸರು ಇಡೋ ವಿಚಾರಕ್ಕೆ ಮಾತನಾಡಿದ ಅವರು, ಇಲ್ಲಿಯ ಎಲ್ಲ ನಾಯಕರ ಜೊತೆಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.
ಸಚಿವ ಸಂಪುಟದ ಬಗ್ಗೆ ಚರ್ಚೆಯಾಗಿಲ್ಲ. ನಾಳೆ ದೆಹಲಿಗೆ ತೆರಳುತ್ತಿದ್ದೇನೆ. ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಿ ಅವರ ಸೂಚನೆ ಮೇರೆಗೆ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಗುರುವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆ ದೊಡ್ಡ ಜಿಲ್ಲೆಯಾಗಿದ್ದು, ಸಚಿವ ಸಂಪುಟ ವಿಸ್ತರಣೆಯಲ್ಲಿ ಯಾವ ಜಿಲ್ಲೆಗೆ ಎಷ್ಟು ಸ್ಥಾನ ನೀಡಬೇಕು ಎಂಬುವುದು ಹೈಕಮಾಂಡ್ ಸೂಚನೆ ಮೇರೆಗೆ ತಿಳಿಸಲಾಗುವುದು ಎಂದರು.
ಬೆಳಗಾವಿ ಜಿಲ್ಲೆ ದೊಡ್ಡದಿದೆ. ಇದರ ವಿಭಜನೆ ಮಾಡಬೇಕೆಂದು ಹಲವಾರು ವರ್ಷಗಳಿಂದ ಬೇಡಿಕೆ ಇದೆ. ಈ ಕುರಿತು ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
ಸಚಿವರಾದ ಸಿ.ಸಿ. ಪಾಟೀಲ್, ಗೋವಿಂದ ಕಾರಜೋಳ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಶಾಸಕ ಮಹಾದೇವಪ್ಪ ಯಾದವಾಡ ಸೇರಿದಂತೆ ಹಲವು ನಾಯಕರು ಇದ್ದರು.