Belagavi News In Kannada | News Belgaum

ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆ

ಬೆಂಗಳೂರು: ಪೊಲೀಸ್​ ಮುಖ್ಯ ಪೇದೆನೋರ್ವ ಮರಕ್ಕೆ ನೇಣು ಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಬೆಂಗಳೂರು ಉತ್ತರ ತಾಲೂಕು ಹೆಸರಘಟ್ಟದಲ್ಲಿ ನಡೆದಿದೆ.
ಬೆಂ.ಉತ್ತರ ತಾಲೂಕಿನ ಹೆಸರುಘಟ್ಟದಲ್ಲಿ ಕೋಡಿಗೆಹಳ್ಳಿ ಪೊಲೀಸ್​ ಠಾಣೆಯ ಮುಖ್ಯಪೇದೆ ಮಂಜುನಾಥ್(44) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ತಿಂಗಳಿಂದ ಕೆಲಸಕ್ಕೆ ತೆರಳಿದೆ ಮನೆಯಲ್ಲೇ ಇದ್ದ ಮಂಜುನಾಥ್ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮನೆಯವರೆಲ್ಲರೂ ಊರಿಗೆ ತೆರಳಿದ್ದ ವೇಳೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸರಿಯಾಗಿ ಕೆಲಸಕ್ಕೆ ಹೋಗದೆ ಕುಡಿತ ಚಟ ಅಂಟಿಸಿಕೊಂಟಿದ್ದರಂತೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.//////