Belagavi News In Kannada | News Belgaum

ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ 43ನೇ ಅರ್ಧಶತಕ

 ಮುಂಬೈ: ಐಪಿಎಲ್ 2022 ಟೂರ್ನಿಯಲ್ಲಿ ಕೊನೆಗೂ ಲಯಕ್ಕೆ ಮರಳಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ, ಆಕರ್ಷಕ ಅರ್ಧಶತಕ ಸಾಧನೆ ಮಾಡಿದ್ದಾರೆ.

ಕೊನೆಯ ಮೂರು ಪಂದ್ಯಗಳಲ್ಲಿ ಎರಡು ಬಾರಿ ಶೂನ್ಯಕ್ಕೆ ಔಟ್ ಆಗಿದ್ದ ಕೊಹ್ಲಿ, ಅತೀವ ಒತ್ತಡಕ್ಕೆ ಒಳಗಾಗಿದ್ದರು.
ಆದರೆ ತಮ್ಮ ವಿರುದ್ಧ ಎದುರಾದ ಟೀಕೆಗಳಿಗೆ ಬ್ಯಾಟ್ ಮೂಲಕವೇ ಉತ್ತರ ನೀಡಿದ್ದಾರೆ.

ಬ್ರೆಬೊರ್ನ್ ಕ್ರೀಡಾಂಗಣದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಶನಿವಾರ ನಡೆಯುತ್ತಿರುವ ಪಂದ್ಯದಲ್ಲಿ ಆರ್‌ಸಿಬಿಗೆ ಆರಂಭದಲ್ಲೇ ಆಘಾತ ಎದುರಾಗಿತ್ತು. ಈ ಹಂತದಲ್ಲಿ ರಜತ್ ಪಾಟಿದಾರ್ ಜೊತೆ ಸೇರಿದ ಕೊಹ್ಲಿ ಅಮೂಲ್ಯ ಜೊತೆಯಾಟದಲ್ಲಿ ಭಾಗಿಯಾದರು.

ಗುಜರಾತ್ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದ ಕೊಹ್ಲಿ, ಸಿಗ್ನೇಚರ್ ಕವರ್ ಡ್ರೈವ್ ಮೂಲಕ ಗಮನ ಸೆಳೆದರು. ಅಲ್ಲದೆ 45 ಎಸೆತಗಳಲ್ಲಿ ಅರ್ಧಶತಕ ಪೂರ್ಣಗೊಳಿಸಿದರು. ಇದು ಐಪಿಎಲ್‌ನಲ್ಲಿ ಕೊಹ್ಲಿ ಬ್ಯಾಟ್‌ನಿಂದ ಸಿಡಿದ 43ನೇ ಅರ್ಧಶತಕವಾಗಿದೆ.

ಆದರೆ ಅರ್ಧಶತಕದ ಬೆನ್ನಲ್ಲೇ ಔಟ್ ಆಗುವ ಮೂಲಕ ನಿರಾಸೆ ಮೂಡಿಸಿದರು. 53 ಎಸೆತಗಳನ್ನು ಎದುರಿಸಿದ ಕೊಹ್ಲಿ ಆರು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 58 ರನ್ ಗಳಿಸಿದರು./////