Belagavi News In Kannada | News Belgaum

ದೇಶದ ಸಮಗ್ರ ಅಭಿವೃದ್ಧಿಗೆ ಎನ್ಇಪಿ ಅವಶ್ಯಕ: ಸಚಿವ ಅಶ್ವಥ್ ನಾರಾಯಣ

ರಾಷ್ಟೀಯ ಶಿಕ್ಷಣ ನೀತಿ- 2020 ಅನುಷ್ಠಾನದ ರಾಷ್ಟ್ರೀಯ ಸಮ್ಮೇಳನ

ಬೆಳಗಾವಿ, ಏ.30 : ರಾಷ್ಟೀಯ ಶಿಕ್ಷಣ ನೀತಿಯಿಂದ ಭಾರತ ಜ್ಞಾನ ಜಗತ್ತಿನ ಬಲಶಾಲಿ ರಾಷ್ಟ್ರವಾಗಲಿದೆ. ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದರಿಂದ, ಸಮತೆಯುಳ್ಳ ಮತ್ತು ಚಲನಶೀಲ ಜ್ಞಾನ ಸಮಾಜದ ಪರಿವರ್ತನೆಗೆ ಹಾಗೂ ದೇಶದ ಸಮಗ್ರ ಅಭಿವೃದ್ಧಿಗೆ ಎನ್ಇಪಿ ಅವಶ್ಯಕ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಅವರು ತಿಳಿಸಿದರು.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಶನಿವಾರ (ಏ.30) ನಡೆದ “ರಾಷ್ಟೀಯ ಶಿಕ್ಷಣ ನೀತಿ- 2020 ಅನುಷ್ಠಾನದ ರಾಷ್ಟ್ರೀಯ ಸಮ್ಮೇಳನ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಸ್ತುತ ಕಾಲಘಟ್ಟದಲ್ಲಿ ವಿಶ್ವದ ಅನೇಕ ದೇಶಗಳು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬೆಳವಣ ಗೆ ಹೊಂದಿವೆ ಇದಕ್ಕೆ ಅನುಗುಣವಾಗಿ ಬಲಿಷ್ಠ ಭಾರತ ನಿರ್ಮಾಣಕ್ಕೆ ರಾಷ್ಟೀಯ ಶಿಕ್ಷಣ ನೀತಿ ಅವಶ್ಯವಿದ್ದು, ದೇಶದಲ್ಲಿ 34 ವರ್ಷಗಳ ನಂತರ ಈ ನೀತಿಯನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದರ ಜೊತೆಗೆ ವೃತ್ತಿಪರ ಬೆಳವಣ ಗೆ ಮೂಲಕ ವಿದ್ಯಾರ್ಥಿಗಳಲ್ಲಿ ಕೌಶಲ್ಯ ಅಭಿವೃದ್ದಿ ಹೆಚ್ಚಿಸುವುದು ಈ ಶೈಕ್ಷಣ ಕ ಪದ್ಧತಿಯ ಉದ್ದೇಶವಾಗಿದೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸದ ನಂತರ ಸಲೀಸಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುಬಹುದು ಎಂದು ಹೇಳಿದರು.

ಮಾನವ ಸಂಪನ್ಮೂಲ ಶಕ್ತಿ ಸದ್ಬಳಕೆ:

ಸ್ವಾಂತಂತ್ರ್ಯ ನಂತರ ನೂತನ ರಾಷ್ಟೀಯ ಶಿಕ್ಷಣ ನೀತಿ ಅನುμÁ್ಠನಗೊಳಿಸುವುದು ಬಹಳ ಸವಾಲಿನ ಕೆಲಸವಾಗಿತ್ತು. ಆದರೆ ಮುಂಬರುವ ದಿನಗಳಲ್ಲಿ ಈ ಶಿಕ್ಷಣ ನೀತಿ ದೇಶದ ಅಭಿuಟಿಜeಜಿiಟಿeಜದ್ಧಿಗೆ ಅನುಕೂಲವಾಗಲಿದೆ. ಭವಿಷ್ಯದಲ್ಲಿ ಸಮಾಜ ಬದಲಾವಣೆಯ ಉತ್ತಮ ಶಿಕ್ಷಣ ನೀತಿ ಇದಾಗಲಿದೆ ಎಂದು ಹೇಳಿದರು.

ವಿದ್ಯಾರ್ಥಿಗಳು, ಯುವಕರು ಉದ್ಯೋಗ ಅರಸಿ ಹೋಗದೆ ಕೌಶಲ್ಯಾಭಿವೃದ್ಧಿಯಿಂದ ಸ್ವಯಂ ಉದ್ಯೋಗ ಸೃಷ್ಟಿಸುವ ಕಾರ್ಯಕ್ಕೆ ಮುಂದಾಗಬೇಕು. ದೇಶದಲ್ಲಿನ ಮಾನವ ಸಂಪನ್ಮೂಲನ ಶಕ್ತಿ ಸದ್ಬಳಕೆ ಮಾಡಿಕೊಂಡು ಸಾಮಾಜಿಕ, ಆರ್ಥಿಕ, ಶೈಕ್ಷಣ ಕ ಬದಲಾವಣೆ ಜೊತೆಗೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣ ಗೆಗೆ ಎನ್ಇಪಿ ಸಹಾಯ ಆಗಲಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳ ಕಲಿಕಾ ಮಟ್ಟ ಹೆಚ್ಚಿಸಲಿದೆ:

ಹೊಸ ರಾಷ್ಟೀಯ ಶಿಕ್ಷಣ ನೀತಿ ಪರಿಣಾಮಕಾರಿಯಾಗಿದ್ದು, ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಹೆಚ್ಚಿಸಿ, ಕಲೆ, ವಾಣ ಜ್ಯ ಹಾಗೂ ತಂತ್ರಜ್ಞಾನ ಸೇರಿದಂತೆ ವಿವಿಧ ವಿಭಾಗದ ವಿದ್ಯಾರ್ಥಿಗಳ ಜ್ಞಾನ ಮಟ್ಟವನ್ನು ಸುಧಾರಿಸಲಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯಲಿದೆ ಎಂದು ಸಚಿವ ಅಶ್ವಥ್ ನಾರಾಯಣ ತಿಳಿಸಿದರು.

ಈ ವೇಳೆ ಮಾತನಾಡಿದ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಭಾರತದಲ್ಲಿ 34 ವರ್ಷಗಳ ನಂತರ, ಉತ್ತಮ ಮಾದರಿಯ ಶಿಕ್ಷಣ ನೀತಿ ಜಾರಿಗೆ ತರಲಾಗಿದೆ. ಶೈಕ್ಷಣ ಕ ಬೆಳವಣ ಯಿಂದ ಸಮಾಜದ ಅಭಿವೃದ್ಧಿ ಜೊತೆಗೆ ಬಲಿಷ್ಠ ಮಾನವ ಸಂಪನ್ಮೂಲ ಶಕ್ತಿ ನಿರ್ಮಾಣಕ್ಕೆ ಈ ಶಿಕ್ಷಣ ನೀತಿ ಸದ್ಬಳಕೆಯಾಗಲಿದೆ ಎಂದು ತಿಳಿಸಿದರು.

ಹೊಸ ಶಿಕ್ಷಣ ನೀತಿಯಿಂದ ವ್ಯಕ್ತಿಯ ಸಂಪೂರ್ಣ ವ್ಯಕ್ತಿತ್ವ ಬೆಳವಣ ಗೆ ಆಗಲಿದೆ. ಸಮಾಜದ ಅಭಿವೃದ್ಧಿಗೆ ಬೇಕಾಗುವ ಉತ್ತಮ ಗುಣಮಟ್ಟದ ಶಿಕ್ಷಣ ನೀತಿ ಇದಾಗಿದ್ದು, ವಿದ್ಯಾರ್ಥಿಗಳು ಕೇವಲ ಪದವಿ ಪ್ರಮಾಣ ಪತ್ರ ಪಡೆಯುವುದು ಮಾತ್ರವಲ್ಲದೆ ವ್ಯಕ್ತಿತ್ವ ವಿಕಸನ ಹೊಂದಬಹುದು ಎಂದು ಸಚಿವ ಬಿ.ಸಿ ನಾಗೇಶ್ ತಿಳಿಸಿದರು.

ಈ ಸಂದರ್ಭದಲ್ಲಿ ಹೊಸ ಶಿಕ್ಷಣ ಪಠ್ಯಗಳ ಅನುಷ್ಠಾನದ ಕುರಿತು ವಾರ್ಷಿಕ ಕ್ರಮಗಳ ಕೈಪಿಡಿ ಹಾಗೂ ಕರ್ನಾಟಕ ಉತ್ತರ ಪ್ರಾಂತ್ಯದ ಸಮಷ್ಟಿ ವಾರ್ಷಿಕ ಪುಸ್ತಕ ಬಿಡುಗಡೆ ಮಾಡಲಾಯಿತು.

ಡಾ. ಮನಮೋಹನ ವೈದ್ಯ, ಭಾರತೀಯ ಶಿಕ್ಷಣ ಮಂಡಲದ ರಾಷ್ಟೀಯ ಅಧ್ಯಕ್ಷರಾದ ಪೆÇ್ರ. ಸಚ್ಚಿದಾನಂದ ಜೋಶಿ, ಭಾರತೀಯ ಶಿಕ್ಷಣ ಮಂಡಲದ ರಾಷ್ಟೀಯ ಸಹ ಸಂಘಟನಾ ಕಾರ್ಯದರ್ಶಿ ಶಂಕರಾನಂದ, ಉತ್ತರ ಕರ್ನಾಟಕ ಭಾಗದ ಭಾರತೀಯ ಶಿಕ್ಷಣ ಮಂಡಲದ ಅಧ್ಯಕ್ಷರಾದ ಡಾ. ಸತೀಶ ಜಿಗಜಿನ್ನಿ, ವಿಟಿಯು ಕುಲಪತಿಗಳಾದ ಪೆÇ್ರ. ಕರಿಸಿದ್ದಪ್ಪ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು./////

ಅಪರಿಚಿತ ವ್ಯಕ್ತಿ ಮೃತ

ಬೆಳಗಾವಿ,ಏ.30: ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ 40 ವರ್ಷದ ಅಪರಿಚಿತ ವ್ಯಕ್ತಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ(ಏ.29) ಸಾವನ್ನಪ್ಪಿದ್ದಾನೆ.

ಏಪ್ರಿಲ್ 18 ರಂದು ಬೆಳಗಾವಿ ರೈಲ್ವೆ ನಿಲ್ದಾಣದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿ ಗುರುವಾರ(ಏ.29) ಮೃತಪಟ್ಟಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಬೆಳಗಾವಿ ರೈಲ್ವೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮೃತ ವ್ಯಕ್ತಿಯ ಚಹರೆ:

5 ಅಡಿ ಎತ್ತರ, ಸಪೂರ ದೇಹ, ಕೆಂಪು ಮೈಬಣ್ಣ, ಚಪ್ಪಟೆ ಮುಖ, ನೀಳ ಮೂಗು, ತಲೆಯಲ್ಲಿ ಳಿ ಇಂಚು ಕಪ್ಪು ಕೂದಲು, ಫ್ರೆಂಚ್ ದಾಡಿ, ಮೀಸೆ ಹೊಂದಿದ್ದಾನೆ. ಬಲಕಿವಿ ಇಲ್ಲದಿರುವ ಈತ ಆರೇಂಜ್ ಹಾಗೂ ಗ್ರೇ ಕಲರ್ ಹಾಫ್ ಟೀ ಶರ್ಟ್ ಧರಿಸಿದ್ದಾನೆ.

ಮೃತ ವ್ಯಕ್ತಿಯ ವಾರಸುದಾರರು ಇದ್ದರೆ ಕೂಡಲೇ ಬೆಳಗಾವಿ ರೈಲ್ವೆ ಪೊಲೀಸ್ ಠಾಣೆಯ ಉಪ ನಿರೀಕ್ಷಕರನ್ನು ಸಂಪರ್ಕಿಸಬಹುದು. ದೂರವಾಣ ಸಂಖ್ಯೆ: 0831-2405273 ಮೊಬೈಲ್ ಸಂಖ್ಯೆ: 9480802127 ಅಥವ ಈ ಮೇಲ್ ವಿಳಾಸ: [email protected] ನ್ನು ಸಂಪರ್ಕಿಸಬಹುದು ಎಂದು ಬೆಳಗಾವಿ ರೈಲ್ವೆ ಪೊಲೀಸ್ ಠಾಣೆಯ ಪಿಎಸ್‍ಐ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////

 

 

ಉದ್ಯಮಶೀಲತಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

 

ಬೆಳಗಾವಿ,ಏ.30: ಕೌಶಲ್ಯಾಭಿವೃದ್ಧಿ ಉದ್ಯಮಶೀ¯ತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿಕೇಂದ್ರ (ಸಿಡಾಕ್) ಸಹಯೋಗದಲ್ಲಿ ಸ್ವಂತ ಉದ್ಯೋಗ ಕೈಗೊಳ್ಳುವವರಿಗಾಗಿ 2022ರ ಮೇ ತಿಂಗಳಲ್ಲಿ ಜಿಲ್ಲೆಯ ಕಿತ್ತೂರಿನಲ್ಲಿ ಹತ್ತು ದಿನಗಳ ಕಾಲ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು/ಪ್ರೋತ್ಸಾಹ, ಮುಂದೆ ಕೈಗೊಳ್ಳಲಾಗುವ ಉದ್ಯಮಶೀಲತಾಭಿವೃದ್ಧಿ ತರಬೇತಿ ಇತ್ಯಾದಿ ವಿಷಯಗಳ ಕುರಿತು ಮಾಹಿತಿಯನ್ನು ನೀಡಲಾಗುವುದು.
ಆಸಕ್ತಿ ಇರುವ ಪರಿಶಿಷ್ಟ ಜಾತಿಯ ಮಹಿಳೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ. ಭಾಗವಹಿಸುವವರು 18 ವರ್ಷಗಳ ವಯಸ್ಸಿನವರಾಗಿರಬೇಕು ಹಾಗೂ ಓದಲು/ಬರೆಯಲು ಬರುತ್ತಿರಬೇಕು.
ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಮತ್ತು ಆಧಾರ ಕಾರ್ಡ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿಯ ದೂರವಾಣ ಸಂಖ್ಯೆ 7483450679ನ್ನು ಸಂಪರ್ಕಿಸಬಹುದು ಎಂದು ಸಿಡಾಕ್ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////

ಮಕ್ಕಳಿಗಾಗಿ ಬೇಸಿಗೆ ಶಿಬಿರ: ಮೇ.5ರಿಂದ 13ರವರೆಗೆ

ಬೆಳಗಾವಿ,ಏ.30: ಜಿಲ್ಲಾ ಬಾಲಭವನ ಹಾಗೂ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ 5 ರಿಂದ 16 ವರ್ಷದೊಳಗಿನ ಮಕ್ಕಳಿಗಾಗಿ ಮೇ 5 ರಿಂದ 13 ರವರೆಗೆ 10 ದಿನಗಳ ಉಚಿತ ಬೇಸಿಗೆ ಶಿಬಿರ ಹಾಗೂ ಹೊರ ಸಂಚಾರವನ್ನು ನಗರದ ಕಣಬರ್ಗಿ ರಸ್ತೆಯ ಭಾರತ ಕಾಲೋನಿಯಲ್ಲಿರುವ ಮಹಿಳಾ ಕಲ್ಯಾಣ ಸಂಸ್ಥೆಯ ಸಭಾಗೃಹದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಆಯೋಜಿಸಲಾಗಿದೆ.
ಶಿಬಿರದಲ್ಲಿ ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಅನುಕೂಲವಾಗುವ ಉಪನ್ಯಾಸ, ಚಿತ್ರಕಲೆ, ಕರಕುಶಲ ಕಲೆ, ಜೇಡಿ ಮಣ ್ಣನ ಕಲೆ, ಸಮೂಹ ನೃತ್ಯ, ಸಮೂಹ ಗೀತೆ, ಯೋಗ, ಕಿರುಚಿತ್ರ ಪ್ರದರ್ಶನ, ಹೊರಸಂಚಾರ ವಿವಿಧ ಸ್ಪರ್ದೆಗಳನ್ನು ಆಯೋಜಿಸುವ ಮೂಲಕ ಸ್ಪರ್ದಾತ್ಮಕ ಮನೋಭಾವನೆ, ನಾಯಕತ್ವ ಗುಣಗಳ ಬೆಳವಣ ಗೆಗೆ ಪ್ರತಿಭೆಗಳ ಹೊರಹಾಕಲು ಅವಕಾಶ ಕಲ್ಪಿಸಲಾಗುವುದು.
ಶಿಬಿರದಲ್ಲಿ ಭಾಗವಹಿಸಲು ಇಚ್ಛಿಸುವ ವಿದ್ಯಾರ್ಥಿಗಳು ದಿನಾಂಕ: ಮೇ 3 2022ರ ಸಂಜೆ 5 ಗಂಟೆಯೊಳಗಾಗಿ ಹೆÉಸರು ನೊಂದಾಯಿಸಬಹದ. ಹೆಚ್ಚಿನ ಮಾಹಿತಿಗಾಗಿ ಎಮ್. ಎಸ್. ಚೌಗಲಾ ಅವರ ಅಥವ ಮೊಬೈಲ್ ಸಂಖ್ಯೆ 9663218860ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಬಾಲಭವನ ಸಮಿತಿಯ ಕಾರ್ಯರ್ದರ್ಶಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////

 

ವಾಕರಸಾ ಸಂಸ್ಥೆ: ತಡೆ ರಹಿತ ಬಸ್‍ಗಳು ಆರಂಭ

 

ಬೆಳೆಗಾವಿ,ಏ.30: ಪ್ರಸ್ತುತ ತಡೆ ರಹಿತ ಬೆಳೆಗಾವಿ-ಹುಬ್ಬಳ್ಳಿ 14 ಸಾರಿಗೆಗಳು ಬೆಳಗಾವಿ-ಧಾರವಾಡ -7ಸಾರಿಗೆಗಳು ಬೆಳಗಾವಿ -ಬೈಲಹೊಂಗಲ-07 ತಡೆರಹಿತ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುತ್ತಿತ್ತು .ಇದೀಗ ಸಾರ್ವಾಜನಿಕ ಹಿತದೃಷ್ಠಿಯಿಂದ ಹಾಗೂ ಬೇಡಿಕೆಯಂತೆ ಹೂಸದಾಗಿ ಬೆಳಗಾವಿ- ಗೋಕಾಕ-06, ಬೈಲಹೊಂಗಲ-ಧಾರವಾಡ-02, ಬೈಲಹೊಂಗಲ-ಯರಗಟ್ಟಿ-02, ರಾಮದುರ್ಗು-ಕುಳ್ಳಗೇರಿ 02., ಹೆಚ್ಚುವರಿ ತಡೆರಹಿತ ಸಾರಿಗೆಗಳನ್ನು ಆರಂಭಿಸಲಾಗಿದೆ.

ಇದರಿಂದ ಬೆಳಗಾವಿ-ಹುಬ್ಬಳ್ಳಿ ಒಟ್ಟು-14, ಬೆಳಗಾವಿ-ಧಾರವಾಡ ಬೆಳಗಾವಿ-ಧಾರವಾಡ ಒಟ್ಟು 10, ಬೆಳಗಾವಿ-ಗೋಕಾಕ ಒಟ್ಟು 06, ಬೆಳಗಾವಿ-ಬೈಲಹೊಂಗಲ ಒಟ್ಟು 11, ಬೈಲಹೊಂಗಲ-ಧಾರವಾಡ 02 ಬೈಲಹೊಂಗಲ-ಯರಗಟ್ಟಿ 02, ರಾಮದುರ್ಗ ಕುಳಗೇರಿ 02, ಹೀಗೆ ಒಟ್ಟು 47 ತಡೆರಹಿತ ಸಾರಿಗೆಗಳನ್ನು ಕಾರ್ಯಾಚರಿಸಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಾಕರಸಾ ಸಂಸ್ಥೆಯ ಬೆಳಗಾವಿ ವಿಭಾಗೀಯ ನಿಯಂತ್ರಣಾಧಿಕಾರಿ ಪಿ ವಾಯ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////

 

ಬಸವ ಹಾಗೂ ಶಿವಾಜಿ ಜಯಂತಿ: ಮೇ.3 ಮತ್ತು 4 ರಂದು ಮದ್ಯ ಮರಾಟ ನಿಷೇಧ

 

ಬೆಳಗಾವಿ,ಏ.30: ಬಸವ ಜಯಂತಿ ಹಾಗೂ ಶಿವಾಜಿ ಜಯಂತಿ ಹಿನ್ನೆಲೆ ಮೇ 3 ಮತ್ತು 4 ರಂದು ಬೆಳಗಾವಿ ತಾಲೂಕಿನಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಎರಡೂ ಜಯಂತಿಗಳ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಮೇ.3 ರಂದು ಬೆಳಿಗ್ಗೆ 600 ಗಂಟೆಯಿಂದ ಮೇ 5ರರಂದು ಬೆಳಿಗ್ಗೆ 0600 ಗಂಟೆಯವರೆಗೆ ಮದ್ಯ ಮಾರಾಟದ ಅಂಗಡಿಗಳು, ಬಾರ್/ ರೆಸ್ಟೋರೆಂಟ್‍ಗಳು, ಕ್ಲಬ್‍ಗಳು ಹಾಗೂ ದಾಸ್ತಾನು ಡಿಪೋಗಳಿಂದ ಸರಬರಾಜನ್ನು ಬಂದ್ ಇಡುವಂತೆ ಆದೇಶಿಸಲಾಗಿದೆ.

ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಈ ಮದ್ಯ ಮಾರಾಟ ನಿಷೇಧಿಸಲಾಗಿದ್ದು ನಿಯಮ ಮೀರಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳು ಹಾಗೂ ಪೊಲೀಸ್ ಆಯುಕ್ತರಾದ ಡಾ. ಬೋರಲಿಂಗಯ್ಯ ಎಂ.ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////