Belagavi News In Kannada | News Belgaum

ಮತ್ತೆ ಗಡಿಭಾಗದಲ್ಲಿ ವಿವಾದದ ಕಿಡಿ ಹೊತ್ತಿಸಿದ ಮಹಾ ಡಿಸಿಎಂ ಅಜಿತ್ ಪವಾರ್ ಹೇಳಿಕೆ

ಮುಂಬೈ: ನೆರೆ ರಾಜ್ಯ ಕರ್ನಾಟಕದ ಗಡಿ ಭಾಗದಲ್ಲಿರುವ ಮರಾಠಿ ಮಾತನಾಡುವ ಜನರಿರುವ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ಹೋರಾಟವನ್ನು ತಾವು ಬೆಂಬಲಿಸುವುದಾಗಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ವಿವಾದಿತ ಹೇಳಿಕೆ ನೀಡಿದ್ದಾರೆ.
ಮಹಾರಾಷ್ಟ್ರದ ಸಂಸ್ಥಾಪನಾ ದಿನದ ಅಂಗವಾಗಿ ಪುಣೆ ನಗರದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 1960 ರ ಈ ದಿನದಂದು ಪಶ್ಚಿಮ ರಾಜ್ಯ ರಚನೆಯಾಯಿತು. ಮಹಾರಾಷ್ಟ್ರ ರಚನೆಯಾಗಿ 62 ವರ್ಷ ಪೂರೈಸಿದೆ. ಮರಾಠಿ ಮಾತನಾಡುವ ಕರ್ನಾಟಕ ರಾಜ್ಯದ ಬೀದರ್, ಭಾಲ್ಕಿ, ಬೆಳಗಾವಿ, ಕಾರವಾರ, ನಿಪ್ಪಾಣಿ ಮತ್ತು ಇತರ ಸ್ಥಳಗಳನ್ನು ಮಹಾರಾಷ್ಟ್ರದೊಂದಿಗೆ ವಿಲೀನಗೊಳಿಸಲು ಸಾಧ್ಯವಾಗದ ಬಗ್ಗೆ ವಿಷಾದಿಸುತ್ತೇವೆ. ಆ ಗ್ರಾಮಗಳು ಮಹಾರಾಷ್ಟ್ರದ ಭಾಗವಾಗುವವರೆಗೆ ನಾವು ಅವರ ಹೋರಾಟವನ್ನು ಬೆಂಬಲಿಸುತ್ತೇವೆ ಎಂದಿದ್ದಾರೆ.
ಕರ್ನಾಟಕದ ಭಾಗವಾಗಿರುವ ಬೆಳಗಾವಿ, ಕಾರವಾರ ಮತ್ತು ನಿಪ್ಪಾಣಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮರಾಠ ಭಾಷಿಗರಿದ್ದಾರೆ. ಗಡಿ ತಗಾದೆಗೆ ಸಂಬಂಧಿಸಿದಂತೆ ಮಹಾಜನ್ ಆಯೋಗ ರಚನೆ ಮಾಡಲಾಗಿತ್ತು. ಅದರ ವರದಿಯ ಪ್ರಕಾರ ಗಡಿ ವಿವಾದ ಇತ್ಯರ್ಥವಾಗಿದೆ. ಆದರೂ ಮಹಾರಾಷ್ಟ್ರ ಈ ಪ್ರದೇಶ ತಮ್ಮಗೆ ಸೇರಿವೆ ಎಂದು ಪ್ರತಿಪಾದಿಸುತ್ತದೆ. ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಸುಪ್ರಿಂ ಕೋರ್ಟ್ ವಿಚಾರಣಾ ಹಂತದಲ್ಲಿದೆ ಎಂದು ಹೇಳಿದ್ದಾರೆ./////