ಮೇ. 16 ರಿಂದಲೇ ಶಾಲೆಗಳು ಪ್ರಾರಂಭ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟನೆ

ಬೆಂಗಳೂರು: ಕರ್ನಾಟಕದ ಕೆಲವು ಭಾಗಗಳಲ್ಲಿ ಏರುತ್ತಿರುವ ತಾಪಮಾನವು ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ಶೈಕ್ಷಣಿಕ ವೇಳಾಪಟ್ಟಿಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾನಾಡಿದ ಅವರು, 2022-23 ನೇ ಸಾಲಿನ ತರಗತಿಗಳು ಮೇ 16 ರಂದು ನಿಗದಿತ ವೇಳಾಪಟ್ಟಿಯಂತೆ ಪ್ರಾರಂಭವಾಗಲಿವೆ. ಅದರಲ್ಲಿ ಯಾವ ಬದಲಾವಣೆಯೂ ಇರುವುದಿಲ್ಲ, ‘ಶೈಕ್ಷಣಿಕ ವರ್ಷದ ಆರಂಭವನ್ನು ವಿಳಂಬಗೊಳಿಸುವಂತೆ ಸರ್ಕಾರಕ್ಕೆ ಯಾವುದೇ ಮನವಿಗಳು ಬಂದಿಲ್ಲ. ಹವಾಮಾನ ಇಲಾಖೆ ತಾಪಮಾನ ಏರಿಕೆಯ ಬಗ್ಗೆ ಯಾವುದೇ ಮುನ್ಸೂಚನೆ ನೀಡಿಲ್ಲ ಎಂದರು.
ಇನ್ನು ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಕಲಿಕಾ ಮಟ್ಟದಲ್ಲಿನ ನಷ್ಟವನ್ನು ಸರಿದೂಗಿಸಲು ಇಲಾಖೆ ಬೇಸಿಗೆ ರಜಾದಿನಗಳನ್ನು 15 ದಿನಗಳವರೆಗೆ ಕಡಿತಗೊಳಿಸಿದೆ.